ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ರಸ್ತೆ ದಾಟುವಾಗ ಲಾರಿ ಡಿಕ್ಕಿ; ಕರ್ತವ್ಯದಲ್ಲಿದ್ದ KSRTC ಚೆಕಿಂಗ್‌ ಇನ್ಸ್‌ಪೆಕ್ಟರ್‌ ಸಾವು

ಸಾರಿಗೆ ಬಸ್‌ ಟಿಕೆಟ್‌ ತಪಾಸಣೆಗೆ ತೆರಳುತ್ತಿದ್ದ ಚೆಕಿಂಗ್ ಇನ್ಸ್‌ಪೆಕ್ಟರ್‌ಗೆ ಕ್ಯಾಂಟರ್‌ ಟ್ರಕ್‌ಗೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನದ ಆಲೂರಿನ ಬಳಿ ನಡೆದಿದೆ. ಮೃತರನ್ನು ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಶಕುನಿಗೌಡ ಎಂದು ಗುರುತಿಸಲಾಗಿದೆ.

ಮೃತ ಇನ್ ಸ್ಪೆಕ್ಟರ್ ಶಕುನಿಗೌಡ

ಹಾಸನ: ಸಾರಿಗೆ ಬಸ್‌ ಟಿಕೆಟ್‌ ತಪಾಸಣೆಗೆ ತೆರಳುತ್ತಿದ್ದ ಚೆಕಿಂಗ್ ಇನ್ಸ್‌ಪೆಕ್ಟರ್‌ಗೆ ಕ್ಯಾಂಟರ್‌ ಟ್ರಕ್‌ಗೆ ಡಿಕ್ಕಿಯಾಗಿ (Road Accident) ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನದ (Haasan) ಆಲೂರಿನ ಬಳಿ ನಡೆದಿದೆ. ಮೃತರನ್ನು ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಶಕುನಿಗೌಡ ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟ‌ರ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ.

ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ಶಕುನಿ ಗೌಡ ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಏಕಾಏಕಿ ವೇಗವಾಗಿ ಬಂದ ಲಾರಿ ಅವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಕ್ಯಾಂಟರ್ ನಿಲ್ಲಿಸದೆ ವಾಹನದ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯೇಕ ಘಟನೆಯಲ್ಲಿ, ಮಾಜಿ ಸಚಿವ ಹೆಚ್ಎಂ ರೇವಣ್ಣ ಅವರ ಪುತ್ರ ಆರ್. ಶಶಾಂಕ್‌ ಪ್ರಯಾಣಿಸತ್ತಿದ್ದ ಕಾರು ಗುರುವಾರ ತಡ ರಾತ್ರಿ ಬೈಕಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕು ಗುಡೇಮಾರನಹಳ್ಳಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಘಟನೆ ವೇಳೆ ರೇವಣ್ಣ ಪುತ್ರ ಶಶಾಂಕ್ ಕಾರು ಚಲಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪವನ್ನು ನಿರಾಕರಿಸಿದ ರೇವಣ್ಣ, ನನ್ನ ಪುತ್ರನ ಕಾರು ಅಪಘಾತವಾಗಿದ್ದು ನಿಜ. ಆದರೆ ಚಾಲಕ ಕಾರು ಚಲಾಯಿಸುತ್ತಿದ್ದರು ಎಂದು ಹೇಳಿದ್ದಾರೆ.

CPI PV Salimath: ಕಾರು ಅಪಘಾತದಲ್ಲಿ ಸಜೀವ ದಹನಗೊಂಡ ಸಿಪಿಐ ಸಾಲಿಮಠ: ಕಾರು ಅಪಘಾತ ಸಂಭವಿಸಿದ್ದು ಹೇಗೆ?

ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ರಾಜೇಶ್(27) ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರು ಬಿದ್ದಿದೆ ಎಂದು ತಿಳಿದು ಬಂದಿದೆ. ಬೈಕ್‌ನಿಂದ ಬಿದ್ದ ಕೂಡಲೇ ಶಶಾಂಕ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರನ್ನು ಯಾರು ಚಾಲನೆ ಮಾಡುತ್ತಿದ್ದರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.