ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Hasanamba Temple: ಹಾಸನಾಂಬೆ ದರ್ಶನದ ವೇಳೆ ಅಧಿಕಾರಿಗಳಿಂದ ಕರ್ತವ್ಯ ಲೋಪ; ನಾಲ್ವರ ಅಮಾನತು

ವರ್ಷದಲ್ಲಿ ಒಂದು ಸಲ ಮಾತ್ರ ದರ್ಶನ ನೀಡುವ ಹಾಸನದ ಹಾಸನಾಂಬೆ ದರ್ಶನೋತ್ಸವ ಅ.9 ರಿಂದ ಶುರುವಾಗಿದ್ದು, ಹಾಸನಾಂಬೆಯನ್ನು ನೋಡಲು ಜನ ಸಾಗರವೇ ಹರಿದು ಬರುತ್ತಿದೆ. ಇದರ ಉಸ್ತುವಾರಿಗಾಗಿ ಕಂದಾಯ ಇಲಾಖೆಯ ಸಿಬ್ಬಂದಿಯನ್ನೂ ನೇಮಿಸಲಾಗಿತ್ತು. ಆದರೆ ಈಗ ಇದೇ ಸಿಬ್ಬಂದಿಗಳಿಂದ ಕರ್ತವ್ಯ ಲೋಪವಾಗಿದೆ.

ಹಾಸನ: ವರ್ಷದಲ್ಲಿ ಒಂದು ಸಲ ಮಾತ್ರ ದರ್ಶನ ನೀಡುವ ಹಾಸನದ (Hasanamba Temple) ಹಾಸನಾಂಬೆ ದರ್ಶನೋತ್ಸವ ಅ.9 ರಿಂದ ಶುರುವಾಗಿದ್ದು, ಹಾಸನಾಂಬೆಯನ್ನು ನೋಡಲು ಜನ ಸಾಗರವೇ ಹರಿದು ಬರುತ್ತಿದೆ. ತಾಯಿಯ ದರ್ಶನದ ಮೊದಲ ದಿನವೇ ಮಳೆ ಅವಾಂತರ ಸೃಷ್ಟಿಸಿತ್ತು. ಈ ನಡುವೆ ಮತ್ತೊಮ್ಮೆ ಕರ್ತವ್ಯ ಲೋಪದ ಆರೋಪ ಕೇಳಿ ಬರುತ್ತಿದೆ. ಈಗಾಗಲೇ ಇಬ್ಬರು ಅಧಿಕಾರಿಗಳು ಅಮಾನತು ಹೊಂದಿದ್ದರು. ಇದೀಗ ಮತ್ತೆ ನಾಲ್ವರನ್ನು ಅಮಾನತುಗೊಳಿಸಲಾಗಿದೆ.

ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಗೋಲ್ಡ್ ಪಾಸ್ ಸೌಲಭ್ಯ ಕಲ್ಪಿಸಲಾಗಿದೆ. ಇದರ ಉಸ್ತುವಾರಿಗಾಗಿ ಕಂದಾಯ ಇಲಾಖೆಯ ಸಿಬ್ಬಂದಿಯನ್ನೂ ನೇಮಿಸಲಾಗಿತ್ತು. ಆದರೆ ಈಗ ಇದೇ ಸಿಬ್ಬಂದಿಗಳಿಂದ ಕರ್ತವ್ಯ ಲೋಪವಾಗಿದ್ದು, ನಾಲ್ವರು ಅಮಾನತುಗೊಂಡಿದ್ದಾರೆ. ಗೋಲ್ಡ್ ಕಾರ್ಡ್​ ಕೌಂಟರ್​ನಲ್ಲಿ ಕುಳಿತಿದ್ದ ಸಿಬ್ಬಂದಿ ಭಕ್ತರ ಕಾರ್ಡ್​ ಸ್ಕ್ಯಾನ್ ಮಾಡದೆಯೇ ಒಳಗೆ ಬಿಟ್ಟಿದ್ದಾರೆ. ಅನಧಿಕೃತ ಪ್ರವೇಶಕ್ಕೆ ಅವಕಾಶ ನೀಡಿರುವುದರಿಂದ ಗೋವಿಂದರಾಜ್ ಹಾಗೂ ಯೋಗಾನಂದ್ ಹಾಗೂ ವಿಎಗಳಾದ ಸಂತೋಷ್ ಅಂಬಿಗರ, ಶಿರಾಜ್ ಮಹಿಮಾ ಪಟೇಲ್ ಇವರನ್ನು ಅಮಾನತುಗೊಳಿಸಲಾಗಿದೆ.

ಸರ್ಕಾರಿ ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಳ್ಳುವುದು ಗಂಭೀರ ಅಪರಾಧ. ಇಂತಹ ವರ್ತನೆ ಸರ್ಕಾರಿ ನೌಕರರಿಗೆ ಯೋಗ್ಯವಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ದೇವಿಯ ದರ್ಶನದ ಮೊದಲ ದಿನವೂ ಕರ್ತವ್ಯ ಐಡಿ ಕಾರ್ಡ್ ದುರುಪಯೋಗ ಮಾಡಿಕೊಂಡಿದ್ದ ಹಿನ್ನೆಲೆ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಬೇಜವಾಬ್ದಾರಿತನ ತೋರುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿತ್ತು.

ಈ ಸುದ್ದಿಯನ್ನೂ ಓದಿ: Viral News: ಕಸದ ಲಾರಿಯಲ್ಲಿ ಸರ್ಕಾರಿ ಆಸ್ಪತ್ರೆಗೆ ಔಷಧ ಸಾಗಾಟ; ವೈದ್ಯನ ಅಮಾನತು

ಲಕ್ಷಕ್ಕೂ ಹೆಚ್ಚು ಭಕ್ತರು (Devotees) ಹಾಸನಾಂಬೆ ದರ್ಶನ ಪಡೆದಿದ್ದಾರೆ. ಇನ್ನು ದಾಖಲೆಯ ಆದಾಯ ಸಂಗ್ರಹವಾಗಿದೆ. ಇಂದು ಒಂದೇ ದಿನ ಒಂದು ಕೋಟಿ ರೂಪಾಯಿಗೂ ಹೆಚ್ಚು ಆದಾಯ ಹಾಸನಾಂಬೆಯ ಬೊಕ್ಕಸಕ್ಕೆ ಹರಿದುಬಂದಿದೆ. ವೀಕೆಂಡ್ ಹಿನ್ನೆಲೆ ಟಿಕೆಟ್ ಮಾರಾಟದಿಂದ ದಾಖಲೆ ಆದಾಯ ಸಂಗ್ರಹವಾಗಿದೆ. ಒಂದು ಸಾವಿರ ಮೌಲ್ಯದ ಟಿಕೆಟ್ ಮಾರಾಟದಿಂದ 65 ಲಕ್ಷ ರೂ. ಸಂಗ್ರಹವಾಗಿದ್ದು, 300 ರೂ. ಮೌಲ್ಯದ ಟಿಕೆಟ್ ಮಾರಾಟದಿಂದ 35 ಲಕ್ಷ ರೂ. ಆದಾಯ ಸಂಗ್ರಹವಾಗಿದೆ. ನಿನ್ನೆ 67 ಲಕ್ಷ ರೂ. ಆದಾಯ ಸಂಗ್ರಹವಾಗಿತ್ತು. ಕಳೆದ ವರ್ಷ 12 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿತ್ತು. ಈ ವರ್ಷ 15 ಕೋಟಿಗೂ ಹೆಚ್ಚು ಆದಾಯ ಸಂಗ್ರಹ ನಿರೀಕ್ಷೆ ಇದೆ.

Vishakha Bhat Heggar

View all posts by this author