ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಾಕೋಲೆಟ್‌ ನೀಡಿ ಲೈಂಗಿಕ ದೌರ್ಜನ್ಯ; ಹಾಸನದಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ಬಾಲಕಿ

Hassan News: ಬಾಲಕಿಯ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯ‌ ಎಸಗಿದ್ದ. ಹೀಗಾಗಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿಯು ನಿತ್ಯ ಚಾಕೋಲೆಟ್​ ನೀಡಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಸದ್ಯ ಆರೋಪಿಯನ್ನು ಚನ್ನರಾಯಪಟ್ಟಣ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಹಾಸನ, ಡಿ.23: ಶಾಲಾ ಬಸ್‌ ಚಾಲಕನೊಬ್ಬ ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿತ್ಯ ಚಾಕೋಲೆಟ್​ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಕಾರಣ, ಬಾಲಕಿಯು ಮಗುವಿಗೆ ಜನ್ಮ ನೀಡಿದ ಘಟನೆ ಜಿಲ್ಲೆಯಲ್ಲಿ (Hassan News) ನಡೆದಿದೆ. ಸದ್ಯ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯು ಖಾಸಗಿ ಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿನಿಯೆಂದು ತಿಳಿದು ಬಂದಿದ್ದು, ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಬಾಲಕಿಯ ಮೇಲೆ ಅದೇ ಶಾಲೆಯ ಬಸ್ ಚಾಲಕನಾಗಿದ್ದ ರಂಜಿತ್ ಎಂಬಾತ 8 ತಿಂಗಳಿನಿಂದ ಲೈಂಗಿಕ ದೌರ್ಜನ್ಯ‌ ಎಸಗಿದ್ದ. ಹೀಗಾಗಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿಯನ್ನು ಚನ್ನರಾಯಪಟ್ಟಣ ನಗರಠಾಣೆಯ ಪೊಲೀಸರು ಈಗಾಗಲೇ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನು ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಕಾಲ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಶೀಘ್ರ ಒಪ್ಪಿಸಲಾಗುವುದು ಎಂದು ಹಾಸನ ಡಿಎಚ್​ಒ ಅನಿಲ್ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಎರಡು ತಿಂಗಳ ಗರ್ಭಿಣಿ ಆತ್ಮಹತ್ಯೆ

ಚಿತ್ರದುರ್ಗ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎರಡು ತಿಂಗಳ ಗರ್ಭಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಚಿತ್ರದುರ್ಗ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುಷ್ಪ (25) ಮೃತ ಮಹಿಳೆ. ಕಾಟಿಹಳ್ಳಿ ಗ್ರಾಮದ ಹರೀಶ್ ಮತ್ತು ಪುಷ್ಪ ಗಾರ್ಮೆಂಟ್ಸ್‌ಗೆ ಹೋಗುವಾಗ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು. ಬಳಿಕ ಇವರು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು.

ಎರಡು ವರ್ಷಗಳಿಂದ ಅನ್ಯೋನ್ಯವಾಗಿದ್ದ ಪುಷ್ಪ ಹಾಗೂ ಹರೀಶ್‌ಗೆ ಒಂದೂವರೆ ವರ್ಷದ ಒಂದು ಗಂಡು ಮಗುವಿದೆ. ಆದರೆ ಅನ್ಯಜಾತಿ ಎಂಬ ಕಾರಣಕ್ಕೆ ಪುಷ್ಪ ಪೋಷಕರನ್ನು ಹರೀಶ್ ಮನೆಗೆ ಬಿಟ್ಟುಕೊಳ್ಳುತ್ತಿರಲಿಲ್ಲ ಎನ್ನಲಾಗಿದೆ. ಅಲ್ಲದೆ ಈ ಮಧ್ಯೆ ಸಣ್ಣಪುಟ್ಟ ವಿಚಾರಕ್ಕೆ ಪದೇ ಪದೇ ಕೌಟಂಬಿಕ ಕಲಹ ಶುರುವಾಗಿದ್ದು, ವಿಚ್ಛೇದನ ಪಡೆಯುವ ಮಟ್ಟಕ್ಕೆ ತಿರುಗಿತ್ತು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆಗ ರಾಜಿ ಸಂಧಾನದೊಂದಿಗೆ ಮನೆಗೆ ತೆರಳಿದ್ದ ಪುಷ್ಪ ನೇಣಿಗೆ ಶರಣಾಗಿದ್ದಾಳೆ.

ಮದುವೆಗೆ ಒಪ್ಪದ ಪ್ರಿಯಕರ; ಬಳ್ಳಾರಿಯಲ್ಲಿ ವಿಡಿಯೊ ಮಾಡುತ್ತಲೇ ವಿವಾಹಿತ ಮಹಿಳೆ ಆತ್ಮಹತ್ಯೆ

ಅಸ್ವಸ್ಥಳಾಗಿದ್ದ ಪತ್ನಿಯನ್ನು ಗಂಡ ಆಸ್ಪತ್ರೆಗೆ ಸೇರಿಸಲು ತೆರಳುವಾಗ ಮಾರ್ಗಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾಳೆ. ಈ ವಿಷಯ ತಿಳಿದು ಆಸ್ಪತ್ರೆಗೆ ದೌಡಾಯಿಸಿದ ಪುಷ್ಪ ಪೋಷಕರು ಹಾಗೂ ಸಂಬಂಧಿಗಳು, ಹರೀಶ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಹರೀಶ್ ಎಸ್ಕೇಪ್ ಆಗಿದ್ದಾನೆ.