Physical Abuse: ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪಕ್ಕದ ಮನೆಯ ಪಾತಕಿ
ಬಾಲಕಿಯ ಪೋಷಕರು ಸಂಬಂಧಿಕರೊಬ್ಬರ ಬೀಗರ ಊಟಕ್ಕೆ ಹೋಗಿದ್ದರು. ಮನೆಯಲ್ಲಿ ಬುದ್ಧಿಮಾಂದ್ಯ ಬಾಲಕಿ ಒಬ್ಬಳೇ ಇದ್ದಳು. ಇದೇ ಸಮಯಕ್ಕಾಗಿ ಕಾದು ಕುಳಿತಿದ್ದ ಕಾಮುಕ ಚಾಕೊಲೆಟ್ ಕೊಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ.

ಸಾಂದರ್ಭಿಕ ಚಿತ್ರ

ಹಾಸನ: ಬುದ್ಧಿಮಾಂದ್ಯ ಬಾಲಕಿಯೊಬ್ಬಳ ಮೇಲೆ ಕಾಮುಕನೊಬ್ಬ ಅತ್ಯಾಚಾರ (Physical Abuse) ಎಸಗಿದ ಘಟನೆ ಹಾಸನ (Hassan news) ಜಿಲ್ಲೆಯ ಬೇಲೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಬಾಲಕಿಯ ಪಕ್ಕದ ಮನೆಯ ನಿವಾಸಿಯಿಂದಲೇ ಹೀನಕೃತ್ಯ (Crime News) ನಡೆದಿದೆ.
ಬಾಲಕಿಯ ಪೋಷಕರು ಸಂಬಂಧಿಕರೊಬ್ಬರ ಬೀಗರ ಊಟಕ್ಕೆ ಹೋಗಿದ್ದರು. ಮನೆಯಲ್ಲಿ ಬುದ್ಧಿಮಾಂದ್ಯ ಬಾಲಕಿ ಒಬ್ಬಳೇ ಇದ್ದಳು. ಇದೇ ಸಮಯಕ್ಕಾಗಿ ಕಾದು ಕುಳಿತಿದ್ದ ಕಾಮುಕ ಚಾಕೊಲೆಟ್ ಕೊಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರವೆಸಗಿದರೂ ಎರಡು ಮಕ್ಕಳ ತಂದೆಯಾದ ಈ ಆರೋಪಿ ಏನೂ ಮಾಡಿಯೇ ಇಲ್ಲ ಎಂಬಂತೆ ಮನೆಯಲ್ಲೇ ಇದ್ದ.
ಸಂಜೆ ವೇಳೆಗೆ ಪೋಷಕರು ಮನೆಗೆ ಬಂದಾಗ ಬಾಲಕಿಯ ವರ್ತನೆ ಬದಲಾಗಿತ್ತು. ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ವಿಷಯ ಪೋಷಕರಿಗೆ ತಿಳಿಯುತ್ತಿದ್ದಂತೆ ಮನೆಯ ಹಿಂಬಾಗಿಲಿನಿಂದ ಆರೋಪಿ ಎಸ್ಕೇಪ್ ಆಗಿದ್ದಾನೆ. ಪಾತಕಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಯಚೂರಿನಲ್ಲಿ ಹೇಯ ಕೃತ್ಯ, 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ
ರಾಯಚೂರು: ರಾಜ್ಯದಲ್ಲಿ ಪುಟ್ಟ ಹೆಣ್ಣು ಮಕ್ಕಳ, ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ರಾಯಚೂರಿನಲ್ಲಿ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ.
ಖಾಸಗಿ ಶಾಲೆಯ 2ನೇ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ನಡೆದಿದೆ. ಪೋತ್ನಾಳ್ ಗ್ರಾಮದ ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಪಾತಕಿ ಶಿವನಗೌಡನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪ್ರತಿದಿನ ಊರಿನಿಂದ ಶಾಲೆಗೆ ಸ್ಕೂಲ್ ಬಸ್‌ನಲ್ಲಿ ಬಾಲಕಿ ತೆರಳುತ್ತಿದ್ದಳು. ಬಂಧಿತ ಆರೋಪಿ ಶಿವನಗೌಡ ಎಂಬಾತ ಅದೇ ಊರಿನವನಾಗಿದ್ದು ಬಾಲಕಿಗೆ ಪರಿಚಿತನಾಗಿದ್ದಾನೆ. ಮಧ್ಯಾಹ್ನ ಶಾಲೆಗೆ ಬರುತ್ತಿದ್ದ ಆರೋಪಿ ಊಟದ ಸಮಯಕ್ಕೆ ಬಾಲಕಿಯನ್ನು ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಆರೋಪಿ ಶಿವನಗೌಡ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: Chikkaballapur News: ಅನೈತಿಕ ಸಂಬಂಧ ಭಾವನನ್ನೇ ಕೊಂದ ಭಾಮೈದ : ಸಿನಿಮೀಯ ಶೈಲಿಯಲ್ಲಿ ಕೊಲೆ