Road Accident: ಹೇಮಾವತಿ ನಾಲೆಗೆ ಉರುಳಿದ ಕಾರು, ಇಬ್ಬರು ಸಾವು, ಇಬ್ಬರು ನೀರುಪಾಲು
ನದಿ ನಾಲೆಯಲ್ಲಿ ಕಾರೊಂದು ಕಂಡಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಪರಿಶೀಲಿಸಿದ್ದಾರೆ. ಕಾರು ಪತ್ತೆಯಾದ ಸಮೀಪದ ದೊಡ್ಡಕುಂಚೇವು ಗ್ರಾಮದ ಕೆರೆಯಲ್ಲಿ ಓರ್ವ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಕಾರಿನಲ್ಲಿ ಇನ್ನಿಬ್ಬರು ಕೊಚ್ಚಿ ಹೋಗಿದ್ದಾರೆ ಎನ್ನಲಾಗುತ್ತಿದೆ.


ಹಾಸನ: ಜಿಲ್ಲೆಯ ಹೇಮಾವತಿ (Hemavati) ನದಿ ನಾಲೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ, ಕಾರಿನಲ್ಲಿದ್ದ ಮತ್ತಿಬ್ಬರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಹಾಸನದ (Hassan) ಹೊಳೆನರಸೀಪುರ ಬಳಿಯ ಹರಳಹಳ್ಳಿ ಗ್ರಾಮದಲ್ಲಿ ಹೇಮಾವತಿಯ ಎಡದಂಡೆ ನಾಲೆಗೆ ಕಾರೊಂದು (Road Accident) ಉರುಳಿ ಬಿದ್ದಿದೆ. ಈ ಪರಿಣಾಮ ಕಾರಿನಲ್ಲಿದ್ದಂತ ನಾಲ್ವರಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಮತ್ತಿಬ್ಬರು ಕೊಚ್ಚಿ ಹೋಗಿರುವುದಾಗಿ ಹೇಳಲಾಗುತ್ತಿದೆ.
ನದಿ ನಾಲೆಯಲ್ಲಿ ಕಾರೊಂದು ಕಂಡಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಪರಿಶೀಲಿಸಿದ್ದಾರೆ. ಕಾರು ಪತ್ತೆಯಾದ ಸಮೀಪದ ದೊಡ್ಡಕುಂಚೇವು ಗ್ರಾಮದ ಕೆರೆಯಲ್ಲಿ ಓರ್ವ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಕಾರಿನಲ್ಲಿ ಇನ್ನಿಬ್ಬರು ಕೊಚ್ಚಿ ಹೋಗಿದ್ದಾರೆ ಎನ್ನಲಾಗುತ್ತಿದೆ. ಅವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್‌ಆರ್‌ಟಿಸಿ ಬಸ್‌ಗೆ ಇನ್ನೋವಾ ಕಾರು ಡಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಸಾವು
ಬಾಗಲಕೋಟೆ: ಕೆಎಸ್‌ಆರ್‌ಟಿಸಿ ಬಸ್‌ಗೆ ಇನ್ನೋವಾ ಕಾರು ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಹುಬ್ಬಳ್ಳಿ -ವಿಜಯಪುರ ಹೆದ್ದಾರಿಯಲ್ಲಿ ನಡೆದಿದೆ. ಕಾರು ಓವರ್ ಟೇಕ್ ಮಾಡಲು ಹೋದ ವೇಳೆ ಅಪಘಾತ ನಡೆದಿದೆ. ಮೃತ ವ್ಯಕ್ತಿಯನ್ನು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಸಾಗರ ತೆಕ್ಕೆನ್ನವರ (62) ಎಂದು ಗುರತಿಸಲಾಗಿದೆ.
ಅಪಘಾತದಲ್ಲಿ ಬಸ್ ಮುಂದಿನ ಗಾಜು ಜಖಂ ಆಗಿದ್ದು, ಕಾರು ನುಜ್ಜುಗುಜ್ಜಾಗಿದೆ. ಇನ್ನು ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Devarayanadurga Temple: ಕುಂಕುಮ ಇಡುವಾಗ ಅನುಚಿತ ವರ್ತನೆ; ವೃದ್ಧ ಅರ್ಚಕನ ಮೇಲೆ ಯುವಕರಿಂದ ಮನಸೋ ಇಚ್ಛೆ ಹಲ್ಲೆ