ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Building collapse: ಬೇಲೂರಿನಲ್ಲಿ ಪಾಳು ಬಿದ್ದ ಕಟ್ಟಡ ಕುಸಿದು ಮೂವರ ಸಾವು

Building collapse: ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ದುರಂತ ನಡೆದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಕಟ್ಟಡದ ಅವಶೇಷದಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬೇಲೂರು ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬೇಲೂರಿನಲ್ಲಿ ಪಾಳು ಬಿದ್ದ ಕಟ್ಟಡ ಕುಸಿದು ಮೂವರ ಸಾವು

Profile Prabhakara R Mar 9, 2025 3:22 PM

ಹಾಸನ: ಪಾಳು ಬಿದ್ದಿದ್ದ ಕಟ್ಟಡ ಕುಸಿದು ಮೂವರು ದುರಂತ ಅಂತ್ಯ ಕಂಡಿರುವ ಘಟನೆ (Building collapse) ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಬೀದಿ ಬದಿ ವ್ಯಾಪಾರಿಗಳಾಗಿದ್ದ ಅಶಾ ಹಾಗು ದೀಪಾ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸತ್ಯನಾರಾಯಣ ಎಂಬುವರಿಗೆ ಸೇರಿದ ಎಂಟು ಮಳಿಗೆಗಳಿದ್ದ ಹಳೆಯ ಕಟ್ಟಡ ಇದಾಗಿದ್ದು, ಇದರಲ್ಲಿ ವ್ಯಾಪಾರ ಮಾಡುತ್ತಿದ್ದರು. ಆದರೆ ಕಟ್ಟಡದ ಸಜ್ಜ ಬಿದ್ದು ಈ ದುರಂತ ಸಂಭವಿಸಿದೆ.

ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ದುರಂತ ನಡೆದಿದೆ.

ಕಟ್ಟಡದ ಅವಶೇಷದಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೇಲೂರು ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | Ranya Roa: ನನಗೂ ಈ ಪಕ್ರರಣಕ್ಕೂ ಸಂಬಂಧವಿಲ್ಲ, ಇಲ್ಲಿ ಸಿಲುಕಿಸಲಾಗಿದೆ; ವಕೀಲರ ಬಳಿ ಕಣ್ಣೀರಿಟ್ಟ ರನ್ಯಾ

ಚಿಕ್ಕಬಳ್ಳಾಪುರದಲ್ಲಿ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನ

ಚಿಕ್ಕಬಳ್ಳಾಪುರ: ಖಾಸಗಿ ಬಸ್‌ ಡಿಕ್ಕಿಯಾದ ಪರಿಣಾಮ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ. ಕಾರಿನಲ್ಲಿದ್ದ ಒಬ್ಬ ಮಹಿಳೆ ಹಾಗೂ ಪುರುಷ ಸಜೀವದಹನವಾಗಿದ್ದು, ಮೃತರನ್ನು ಆಂಧ್ರ ಪ್ರದೇಶ ಮೂಲದ ಧನಂಜಯ ರೆಡ್ಡಿ(31ವ), ಕಲಾವತಿ(35ವ) ಮೃತರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನುಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭೀಕರ ಅಪಘಾತದಲ್ಲಿ ಕಾರು ಬೆಂಕಿಯಿಂದ ಹೊತ್ತಿ ಉರಿದಿದ್ದರೆ, ಬಸ್​​ ಪಲ್ಟಿಯಾಗಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮದನಪಲ್ಲಿ ನಿವಾಸಿಗಳಾದ ಇಬ್ಬರು ಸುಟ್ಟು ಕರಕಲಾಗಿದ್ದರೆ, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಬಸ್​ನಲ್ಲಿ ಪ್ರಯಾಣಿಕರೆಲ್ಲರೂ ಬಚಾವಾಗಿದ್ದಾರೆ.

ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಐವರ ದುರ್ಮರಣ

ಚಿತ್ರದುರ್ಗ: ಲಾರಿಗೆ ಕಾರು ಡಿಕ್ಕಿಯಾಗಿ ಐವರು ದುರ್ಮರಣ ಹೊಂದಿರುವ ಭೀಕರ ಘಟನೆ (Chitradurga Accident) ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಭಾನುವಾರ ನಡೆದಿದೆ. ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ(50) ಸೇರಿ ಐವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಭೀಕರ ಅಪಘಾತ ನಡೆದಿದೆ. ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದೆ. ಹೀಗಾಗಿ ಅವರು ಕಾರಿನಲ್ಲಿ ಸವದತ್ತಿಯ ರೇಣುಕಾ ಯಲ್ಲಮ್ಮ‌ ದೇಗುಲಕ್ಕೆ ಹೋಗಿ ಹಿಂದಿರುಗುತ್ತಿದ್ದರು ಎನ್ನಲಾಗಿದೆ.

ಈ ಸುದ್ದಿಯನ್ನೂ ಓದಿ | Chhaava Movie: 'ಛಾವಾ' ಎಫೆಕ್ಟ್! ನಿಧಿಗಾಗಿ ರಾತ್ರೋರಾತ್ರಿ ಭೂಮಿ ಅಗೆದ ಗ್ರಾಮಸ್ಥರು

ಬೆಂಗಳೂರು ಮೂಲದ ಇನ್ನೋವಾ ಕಾರು, ತಮಿಳುನಾಡು ಪಾಸಿಂಗ್ ಇರುವ ಲಾರಿ ಹಿಂಬದಿಗೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಪೃತಪಟ್ಟಿದ್ದಾರೆ. ಗುದ್ದಿದ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.