ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಹಾಸನದಲ್ಲಿ ಮಹಿಳೆಯನ್ನು ಬೆನ್ನಟ್ಟಿ ತುಳಿದು ಕೊಂದ ಕಾಡಾನೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮುಗುಲಿ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ಹಾವಳಿ ಹೆಚ್ಚಳವಾಗಿರುವ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಮಹಿಳೆಯ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹಾಸನದಲ್ಲಿ ಮಹಿಳೆಯನ್ನು ಬೆನ್ನಟ್ಟಿ ತುಳಿದು ಕೊಂದ ಕಾಡಾನೆ

ಆನೆ ದಾಳಿಯಿಂದ ಮೃತಪಟ್ಟ ಮಹಿಳೆ ಶೋಭಾ. -

Prabhakara R
Prabhakara R Jan 13, 2026 3:13 PM

ಹಾಸನ: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಮುಗುಲಿ ಗ್ರಾಮದಲ್ಲಿ ನಡೆದಿದೆ. ಶೋಭಾ (40) ಮೃತ ಮಹಿಳೆ. ಮಂಗಳವಾರ ಬೆಳಗ್ಗೆ ಕಾಫಿ ತೋಟದಲ್ಲಿ ಕೆಲಸಕ್ಕೆ ಹೋಗಿದ್ದಾಗ ಕಾಡಾನೆ ದಾಳಿ ಮಾಡಿದೆ. ಶೋಭಾ ಅವರನ್ನು ಬೆನ್ನಟ್ಟಿ ತುಳಿದು ಸಾಯಿಸಿದೆ. ಸ್ಥಳಕ್ಕೆ ಡಿಎಫ್‌ಒ ಸೌರಭ್ ಕುಮಾರ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಆನೆಯು ಇತ್ತೀಚೆಗೆ ಕೊಡಗಿನಿಂದ ಹಾಸನದತ್ತ ಬಂದಿತ್ತು ಎನ್ನಲಾಗುತ್ತಿದೆ. ಮೃತ ಶೋಭಾ ಅವರು ಒಂದೂವರೆ ಎಕರೆ ಕಾಫಿ ತೋಟವನ್ನು ಹೊಂದಿದ್ದು, ಅವರ ತಾಯಿ ರಾಜಮ್ಮ ಕೂಡ ಜತೆಯಲ್ಲಿ ಹೋಗಿದ್ದರು. ಇಬ್ಬರೂ ನಡೆದುಕೊಂಡು ಹೋಗುತ್ತಿದ್ದ ವೇಳೆ ಆನೆ ದಾಳಿ ಮಾಡಿದೆ. ರಾಜಮ್ಮ ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಆನೆಯು ಶೋಭಾ ಅವರನ್ನು ಕಾಲು ಕೆಳಗೆ ಹಾಕಿ ತುಳಿದಿದ್ದರಿಂದ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಇನ್ನು ಕಾಡಾನೆಗಳ ಹಾವಳಿ ಹೆಚ್ಚಳವಾಗಿರುವ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯ ಮೃತದೇಹ ಎತ್ತಲೂ ಬಿಡದೆ ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಗ್ರಾಮಸ್ಥರು ಧರಣಿ ಮಾಡುತ್ತಿದ್ದಾರೆ. ಮೃತ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಅಂತ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಆನೆ ಸೆರೆಗೆ ಸಚಿವ ಖಂಡ್ರೆ ಸೂಚನೆ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೂಡಲೇ ಸ್ಥಳಕ್ಕೆ ಧಾವಿಸಿ ಆನೆಯನ್ನು ಮರಳಿ ಕಾಡಿಗೆ ಮರಳಿಸಲು ಅಥವಾ ಆನೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರತಿಯೊಂದು ಜೀವವೂ ಅಮೂಲ್ಯ, ಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಆಕಸ್ಮಿಕವಾಗಿ ವನ್ಯಜೀವಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ಆಸರೆಯಾಗಲು ನಿಯಮಾನುಸಾರ ಪರಿಹಾರ ನೀಡುವಂತೆಯೂ ತಿಳಿಸಿದ್ದಾರೆ.

Self Harming: ಶಾಲೆಗೆ ಹೋಗು ಎಂದದ್ದಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ವನ್ಯಜೀವಿಗಳಿಂದ ಮಾನವ ಜೀವ ಹಾನಿ ಸಂಭವಿಸದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಆನೆಗಳ ಸಂಚಾರದ ಬಗ್ಗೆ ಸ್ಥಳೀಯರಿಗೆ ಎಚ್ಚರಿಕೆ ಸಂದೇಶ ರವಾನಿಸಲು ಮತ್ತು ಆನೆ ಕಾರ್ಯಪಡೆ ಸಿಬ್ಬಂದಿಯನ್ನು ನಿಯೋಜಿಸಲೂ ಈಶ್ವರ ಖಂಡ್ರೆ ಸೂಚಿಸಿದ್ದಾರೆ.