ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶಿಗ್ಗಾವಿಯ ಆಂಜನೇಯ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ; ಮುಸ್ಲಿಂ ಯುವಕ ಅರೆಸ್ಟ್‌

ಆರೋಪಿಯು ಮದ್ಯದ ಅಮಲಿನಲ್ಲಿ ಆಂಜನೇಯ ದೇವಸ್ಥಾನದೊಳಗೆ ತೆರಳಿ ಮಲಗಿದ್ದಲ್ಲದೆ, ದೇವರ ಮೂರ್ತಿಯ ಎದುರು ಮೂತ್ರ ವಿಸರ್ಜನೆ ಮಾಡಿ ದೇವಸ್ಥಾನವನ್ನು ಅಪವಿತ್ರಗೊಳಿಸಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಶಿಗ್ಗಾವಿ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿದ ಮುಸ್ಲಿಂ ಯುವಕ!

-

Prabhakara R
Prabhakara R Aug 21, 2026 4:26 PM

ಶಿಗ್ಗಾವಿ: ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ (Shiggavi) ಆಂಜನೇಯ ದೇವಸ್ಥಾನದ ಆವರಣದಲ್ಲಿ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಅನುಚಿತವಾಗಿ ವರ್ತಿಸಿ, ದೇವರ ಮೂರ್ತಿಯ ಎದುರು ಮೂತ್ರ ವಿಸರ್ಜನೆ ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಶಿಗ್ಗಾವಿ ಪಟ್ಟಣದಲ್ಲಿ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ ಹಾನಗಲ್ ಪಟ್ಟಣದ ನಿವಾಸಿ ಎನ್ನಲಾಗಿರುವ ಮಹಮ್ಮದ್ ಜಾಫರ್ ಖದರಮಂಡಲಗಿ ಎಂಬಾತನ ವಿರುದ್ಧ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

ಆರೋಪಿಯು ಮದ್ಯದ ಅಮಲಿನಲ್ಲಿ ದೇವಸ್ಥಾನದೊಳಗೆ ತೆರಳಿ ಮಲಗಿದ್ದಲ್ಲದೆ, ದೇವರ ಮೂರ್ತಿಯ ಎದುರು ಮೂತ್ರ ವಿಸರ್ಜನೆ ಮಾಡಿ ದೇವಸ್ಥಾನವನ್ನು ಅಪವಿತ್ರಗೊಳಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಕುರಿತು ಟೆಂಪೋ ಚಾಲಕ ಹಾಗೂ ಮಾಲಕರ ಸಂಘದ ಅಧ್ಯಕ್ಷ ಸಿದ್ದಪ್ಪ ಶಿವಪ್ಪ ಕಾಳೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ, ಶಿಗ್ಗಾವಿ ಪೊಲೀಸ್ ಠಾಣೆ ಎದುರು ಕುಳಿತು ಪ್ರತಿಭಟನೆ ನಡೆಸಿದರು.

ದೇವಸ್ಥಾನ ಶುದ್ಧೀಕರಣಕ್ಕೆ ಆಗ್ರಹ

ಘಟನೆಯ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಸಂಪೂರ್ಣವಾಗಿ ಶುಚಿಗೊಳಿಸಿ, ಧಾರ್ಮಿಕ ವಿಧಿ-ವಿಧಾನಗಳ ಮೂಲಕ ಶುದ್ಧೀಕರಣ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು. ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಕರಣದ ಸತ್ಯಾಸತ್ಯತೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಆರೋಪಿಯ ಹೇಳಿಕೆ ಹಾಗೂ ಲಭ್ಯ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.