#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Mylara Karnika: ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್!

12 ಅಡಿ ಎತ್ತರದ ಬಿಲ್ಲೇರಿದ ಗೊರವಯ್ಯ ಹನುಮಗೌಡ ಗುರೇಗೌಡರು ದೈವವಾಣಿ ನುಡಿದಿದ್ದು, 'ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್' ಎಂದು ನುಡಿದಿದ್ದಾರೆ. ಮೈಲಾರ ಕಾರ್ಣಿಕ ಶುಭ ಸೂಚನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್!

ಮೈಲಾರ ಕಾರ್ಣಿಕ

ಹರೀಶ್‌ ಕೇರ ಹರೀಶ್‌ ಕೇರ Feb 13, 2025 7:23 AM

ಹಾವೇರಿ: ಹಾವೇರಿ (Haveri News) ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಬಿಲ್ಲೇರಿದ ಗೊರವಯ್ಯ ರಾಜ್ಯ ಸಂಭ್ರಮಪಡುವಂಥ ಕಾರ್ಣಿಕ (Mylara Karnika) ನುಡಿದಿದ್ದಾರೆ. ಜಾತ್ರೆ ಸಂಭ್ರಮದಿಂದ ನಡೆದಿದ್ದು, ಸಾವಿರಾರು ಸಂಖ್ಯೆಯ ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು. 12 ಅಡಿ ಎತ್ತರದ ಬಿಲ್ಲೇರಿದ ಗೊರವಯ್ಯ ಹನುಮಗೌಡ ಗುರೇಗೌಡರು ದೈವವಾಣಿ ನುಡಿದಿದ್ದು, 'ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್' ಎಂದು ನುಡಿದಿದ್ದಾರೆ.

ಮೈಲಾರ ಕಾರ್ಣಿಕ ಶುಭ ಸೂಚನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಲಿದೆ ಎಂದು ವಿಶ್ಲೇಷಣೆ ಮಾಡಿದ್ದಾರೆ. ಈ ಸಲ ಉತ್ತಮ ಮಳೆ ನಿರೀಕ್ಷೆ ಇದೆ. ಕಳೆದ ಬಾರಿ ಮುಂಗಾರು ಮತ್ತು ಹಿಂಗಾರು ಉತ್ತಮವಾಗಿದ್ದ ಕಾರಣ ರಾಜ್ಯದಲ್ಲಿ ನೀರಿನ ಸಮಸ್ಯೆ ಇರಲಿಲ್ಲ. ಮುಖ್ಯವಾಗಿ ಎಲ್ಲಾ ಜಲಾಶಯಗಳು ಭರ್ತಿಯಾಗಿದ್ದು ಬೇಸಿಗೆಯಲ್ಲೂ ನೀರಿಗೆ ಸಮಸ್ಯೆ ಇರುವುದಿಲ್ಲ ಎಂದು ನಿರೀಕ್ಷೆ ಮಾಡಲಾಗಿದೆ.

ಇನ್ನು ಈ ವರ್ಷ ಕೂಡ ಉತ್ತಮ ಮಳೆಯಾದರೆ ರಾಜ್ಯದ ಕೆರೆ ಕಟ್ಟೆಗಳು ಭರ್ತಿಯಾಗಲಿದ್ದು ರೈತರ ಮುಖದಲ್ಲಿ ಮಂದಹಾಸ ಮೂಡಲಿದೆ. ಎಲ್‌ ನಿನೋ ಪರಿಣಾಮದಿಂದಾಗಿ ರಾಜ್ಯದಲ್ಲಿ ಸರಿಯಾಗಿ ಮಳೆಯಾಗಿರಲಿಲ್ಲ. ಈ ವರ್ಷ ಮುಂಗಾರು ವೇಳೆಗೆ ಲಾ ನಿನಾ ಉಂಟಾಗಲಿದ್ದು ಇದು ವ್ಯಾಪಕ ಮಳೆಯನ್ನು ತರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಳೆದ ಹಿಂಗಾರು ವೇಳೆಗೆ ಲಾ ನಿನಾ ಉಂಟಾಗಬೇಕಿತ್ತಾದರೂ, ಹವಾಮಾನ ವೈಪರಿತ್ಯದಿಂದ ಈ ವರ್ಷದ ಮುಂಗಾರಿನಲ್ಲಿ ಉಂಟಾಗುವ ಸಾಧ್ಯತೆ ಇದೆ.

ಕಳೆದ ವರ್ಷ ನುಡಿದಿದ್ದ ಕಾರ್ಣಿಕ ನಿಜವಾಗಿತ್ತು ಎನ್ನಲಾಗುತ್ತದೆ. ಕಳೆದ ವರ್ಷ ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಮೈಲಾರಲಿಂಗ ʼಸಂಪಾಯಿತಲೇ ಪರಾಕ್ʼ ಎಂದು ನುಡಿದಿದ್ದ ಕಾರ್ಣಿಕ ನಿಜವಾಗಿತ್ತು. ದೈವವಾಣಿಯಂತೆ ರಾಜ್ಯದಲ್ಲಿ ಮಳೆ ಉತ್ತಮವಾಗಿತ್ತು. 2023ರಲ್ಲಿ ಬರಗಾಲದಿಂದ ತತ್ತರಿಸಿದ್ದ ಕರ್ನಾಟಕ ರಾಜ್ಯಕ್ಕೆ ಈ ಕಾರ್ಣಿಕ ನಿಟ್ಟುಸಿರು ಬಿಡುವಂತೆ ಮಾಡಿತ್ತು. ನಂಬಿಕೆಯಂತೆ ರಾಜ್ಯಾದ್ಯಂತ ಭರ್ಜರಿ ಮಳೆಯಾಗಿದ್ದು, ಎಲ್ಲಾ ಜಲಾಶಯಗಳು ತುಂಬಿ ಹರಿದಿವೆ.

ಇದನ್ನೂ ಓದಿ: CM Siddaramaiah: ಸಿಎಂ ಕಾಲಿಗೆ ಏನಾಯ್ತು? ವ್ಹೀಲ್‌ ಚೇರ್‌ನಲ್ಲೇ ʼಇನ್ವೆಸ್ಟ್‌ ಕರ್ನಾಟಕʼ ವೇದಿಕೆಗೆ ಬಂದ ಸಿದ್ದರಾಮಯ್ಯ!