ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Haveri Accident: ಹಾವೇರಿ ಬಳಿ ಬಸ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ 15 ಜನಕ್ಕೆ ತೀವ್ರ ಗಾಯ

ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿ ಅಪಘಾತ ನಡೆದಿದೆ. ಹಾವನೂರು ಜಾತ್ರೆಗೆಂದು ಹಳೇರಿತ್ತಿಯಿಂದ ಜನರನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್, ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಹಾವೇರಿ ಬಳಿ ಬಸ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ 15 ಮಂದಿಗೆ ಗಾಯ

ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿ ಟ್ರ್ಯಾಕ್ಟರ್‌-ಬಸ್‌ ನಡುವೆ ಅಪಘಾತ ನಡೆದಿರುವುದು. -

Prabhakara R
Prabhakara R Jan 27, 2026 8:59 PM

ಹಾವೇರಿ: ಟ್ರ್ಯಾಕ್ಟರ್ ಮತ್ತು ಸಾರಿಗೆ ಬಸ್‌ ಮುಖಾಮುಖಿ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾವನೂರು ಜಾತ್ರೆಗೆಂದು ಹಳೇರಿತ್ತಿಯಿಂದ ಜನರನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿಯಾಗಿದ್ದರಿಂದ ಅಪಘಾತ ಸಂಭವಿಸಿದೆ. ಈ ವೇಳೆ ಟ್ರ್ಯಾಕ್ಟರ್‌ನಲ್ಲಿದ್ದ ಹತ್ತಾರು ಸಣ್ಣಪುಟ್ಟ ಮಕ್ಕಳಿಗೂ ತೀವ್ರ ಗಾಯಗಳಾಗಿದ್ದು, ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಜ.24ರಿಂದ ಆರಂಭವಾಗಿರುವ ಹಾವನೂರು ಜಾತ್ರೆಯನ್ನು ನೋಡಲು ಜನರು ಹಳೇರಿತ್ತಿ ಗ್ರಾಮದಿಂದ ಹಾವನೂರು ಜಾತ್ರೆಗೆ ಟ್ರ್ಯಾಕ್ಟರ್‌ನಲ್ಲಿ ಹೋಗುತ್ತಿದ್ದರೆಂದು ತಿಳಿದು ಬಂದಿದೆ.

ಹಳೇರಿತ್ತಿ ಗ್ರಾಮದ ಬೇಟಗೇರಿ ಕುಟುಂಬ ಸದಸ್ಯರು ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ಹಾವೇರಿ ತಹಸೀಲ್ದಾರ್‌ ಶರಣಮ್ಮ ಹಾಗೂ ಗುತ್ತಲ ಪೊಲೀಸರು ಭೇಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

2 ಲಕ್ಷ ಹಣಕ್ಕಾಗಿ ತಾಯಿಯನ್ನೇ ಕೊಲೆಗೈದ ಪಾಪಿಮಗ!

ರಾಯಚೂರು: ಹಣ ಕೊಡಲು ನಿರಾಕರಿಸಿದ ತಾಯಿಯನ್ನೇ ಮಗ ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ಮಸ್ಕಿ ತಾಲೂಕಿನ ಜಕ್ಕೇರುಮಡು ತಾಂಡ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಚಂದವ್ವ (58) ಕೊಲೆಯಾದವರು. ಕೊಲೆಗಡುಕ ಮಗ ಕುಮಾರನನ್ನು ಮುದಗಲ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕುಮಾರ, ಊರಿಗೆ ಬಂದಾಗಲೆಲ್ಲ ಹಣ ಕೊಡುವಂತೆ ತನ್ನ ತಾಯಿ ಚಂದವ್ ಜತೆ ಜಗಳ ತೆಗೆದು ಹಲ್ಲೆ ಮಾಡುತ್ತಿದ್ದ. ಜ. 25ರಂದು ಬೆಳಗ್ಗೆ ಬೆಂಗಳೂರಿನಿಂದ ಜಕ್ಕೇರುಮಡು ತಾಂಡಕ್ಕೆ ಬಂದಿದ್ದ ಆತ, ತಾಯಿಯೊಂದಿಗೆ ಜಗಳ ತೆಗೆದು ಹೊಲ ಮಾರಾಟ ಮಾಡಿ ಇಲ್ಲವೇ ಅಡವಿಟ್ಟು ಎರಡು ಲಕ್ಷ ರೂಪಾಯಿ ನೀಡುವಂತೆ ಒತ್ತಾಯಿಸಿದ್ದ.

ಇದಕ್ಕೆ ಚಂದವ್ವ, ಕಿರಿಯ ಪುತ್ರ ಸಂತೋಷನ ಮದುವೆ ಮಾಡಬೇಕು, ನಮ್ಮ ಹತ್ತಿರ ಹಣವಿಲ್ಲ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಕುಮಾರ ಮನೆಯ ಚಾವಣಿಗೆ ಹಾಕಿರುವ ಸಿಮೆಂಟಿನ ಶೀಟ್‌ಗಳನ್ನು ಒಡೆದು, ನಾಳೆಯೊಳಗೆ ಹಣ ನೀಡಬೇಕು, ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ತೆರಳಿದ್ದ.

ಗಣರಾಜ್ಯೋತ್ಸವ ದಿನವೇ ಘೋರ ದುರಂತ; ಧ್ವಜ ಇಳಿಸುವಾಗ ವಿದ್ಯುತ್ ಸ್ಪರ್ಶಿಸಿ 10ನೇ ತರಗತಿ ವಿದ್ಯಾರ್ಥಿ ಸಾವು

ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ತಾಯಿ ಮನೆಗೆ ಬಂದು ಜಗಳ ತೆಗೆದ ಕುಮಾರ, 2 ಲಕ್ಷ ಹಣ ಕೊಡು, ನಾನು ಬೆಂಗಳೂರಿಗೆ ಹೋಗಬೇಕು ಎಂದು ಹೇಳಿದ್ದಾನೆ. ತಾಯಿ ಚಂದವ್ವ ಹಣವಿಲ್ಲ ಎಂದಿದ್ದಕ್ಕೆ ಏಕಾಏಕಿ ತಾಯಿಯ ತಲೆ ಕೂದಲು ಹಿಡಿದು ಗೋಡೆಗೆ ಗುದ್ದಿಸಿ, ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಚಂದವ್ವ ಮುದಗಲ್ ಸರ್ಕಾರಿ ಆಸ್ಪತ್ರೆಗೆಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.