ಹಾವೇರಿ ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ನುಗ್ಗಿದ ಬಸ್; 2 ವರ್ಷದ ಮಗು ಸಾವು, ನಾಲ್ವರಿಗೆ ಗಾಯ! Video
Haveri Bus stand Accident: ಹಾವೇರಿಯ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ದುರಂತ ಸಂಭವಿಸಿದೆ. ಈ ಸಂಬಂಧ ಹಾವೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ ಬಸ್ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಮೇಲೆ ನುಗ್ಗಿರುವ ಬಸ್. -
ಹಾವೇರಿ: ನಗರದ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್ ನಿಲ್ದಾಣದಲ್ಲಿ (Haveri Bus stand Accident) ಬುಧವಾರ ಮುಂಜಾನೆ ಘೋರ ಅಪಘಾತ ಸಂಭವಿಸಿದೆ. ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪ್ಲಾಟ್‌ಫಾರ್ಮ್ ಮೇಲೆ ನಿಂತಿದ್ದವರ ಮೇಲೆ ಬಸ್ ನುಗ್ಗಿದ ಪರಿಣಾಮ ಎರಡು ವರ್ಷದ ಪುಟ್ಟ ಮಗು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬುಧವಾರ ಮುಂಜಾನೆ ಸುಮಾರು 06.30 ಗಂಟೆಯಲ್ಲಿ ಘಟನೆ ಸಂಭವಿಸಿದೆ. ವಾಯವ್ಯ ಕರ್ನಾಟಕ ಸಾರಿಗೆ ಬಸ್ ಚಾಲಕ ಮಂಜುನಾಥ ಎಂಬಾತನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ದುರಂತ ಸಂಭವಿಸಿದೆ. ಪ್ಲಾಟ್ ಫಾರ್ಮ್ ನಂ.2 ಕಡೆಗೆ ಏಕಾಏಕಿ ಸಾರಿಗೆ ಬಸ್ ನುಗ್ಗಿದ್ದರಿಂದ ಸವಣೂರಿನ ಹಜರತ್ ಅಲಿ (2) ಮಗು ಮೃತಪಟ್ಟಿದೆ. ಘಟನೆಯಲ್ಲಿ ಬಂಕಾಪುರದ ವಾಸುದೇವ (44), ಹರ್ಷ (6), ಕಾವ್ಯಾಂಜಲಿ (39), ಅರಬಜ್‌ಖಾನ್ (13) ಗಾಯಗೊಂಡಿದ್ದಾರೆ.
A horrific accident occurred early on Thursday morning (April 1) at the Haveri city bus stand when a bus lost control and rammed into passengers waiting on the platform.
— Hate Detector 🔍 (@HateDetectors) April 1, 2026
Four people sustained serious injuries in the incident, which took place around 7:00 AM.
Authorities said… pic.twitter.com/o0LDVixHcm
Bidar Rain: ಬೀದರ್‌ನಲ್ಲಿ ಮಳೆ ಅಬ್ಬರ; ಸಿಡಿಲು ಬಡಿದು ಯುವರೈತ ಸಾವು
ಬಸ್ ಹರಿದಿದ್ದರಿಂದ ಹಜರತ್ ಅಲಿ ತೀವ್ರವಾಗಿ ಗಾಯಗೊಂಡಿದ್ದ. ತಕ್ಷಣವೇ ಹಾವೇರಿ ಜಿಲ್ಲಾಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಹಜರತ್ ಅಲಿ ಮೃತಪಟ್ಟಿದ್ದಾನೆ. ಈ ಅಪಘಾತದ ಬಗ್ಗೆ ನಯಿಮ್ ಎಂಬುವವರು ನೀಡಿದ ದೂರಿನ ಮೇರೆಗೆ ಹಾವೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜನರ ಮೇಲೆ ಬಸ್ ನುಗ್ಗಿದ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೆಳ್ತಂಗಡಿಯಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಕೆಳಕ್ಕೆ ಬಿದ್ದ ಇಬ್ಬರು ವಿದ್ಯಾರ್ಥಿನಿಯರು!

ಬೆಳ್ತಂಗಡಿ: ಚಲಿಸುತ್ತಿದ್ದ ಸಾರಿಗೆ ಬಸ್‌ನಿಂದ ಬಿದ್ದು ಇಬ್ಬರು ವಿದ್ಯಾರ್ಥಿನಿಯರು (girl students) ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ (Belthangady) ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ನಡೆದಿದೆ. ಗೇರುಕಟ್ಟೆಯಿಂದ ಬೆಳ್ತಂಗಡಿಗೆ ತೆರಳಲು ಇಬ್ಬರು ಸಹೋದರಿಯರು ಕೆಎಸ್ಆರ್ಟಿಸಿ ಬಸ್ ಹತ್ತಿದ್ದರು. ರೇಷ್ಮೆ ಕ್ರಾಸ್ ರೋಡ್ ಬಳಿ ತಿರುವಿನಲ್ಲಿ ಒಮ್ಮೆಲೆ ಬಸ್ನ ಬಾಗಿಲು ತೆರೆದು ವಿದ್ಯಾರ್ಥಿನಿಯರು ಕೆಳಕ್ಕೆ ಬಿದ್ದಿದ್ದಾರೆ. ಘಟನೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸ್ನ ಬಾಗಿಲು ಏಕಾಏಕಿ ತೆರೆದಿದ್ದರಿಂದ ಅಕ್ಕ ಕೆಳಗೆ ಬೀಳುತ್ತಿದ್ದಾಗ, ಆಕೆಯನ್ನು ರಕ್ಷಿಸಲು ತಂಗಿ ಮುಂದಾಗಿ ನಿಯಂತ್ರಣ ತಪ್ಪಿ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಾಹಿತಿ ಪ್ರಕಾರ ಒಬ್ಬ ವಿದ್ಯಾರ್ಥಿನಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದರೆ, ಮತ್ತೊಬ್ಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ. ಇವರು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಾಗರಾಜ ಹಾಗೂ ರೂಪ ದಂಪತಿ ಮಕ್ಕಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಚಿಕಿತ್ಸೆ ಬಳಿಕ ಸಹಾಯಕಿಯ ನೆರವಿನೊಂದಿಗೆ ಗಾಯಾಳು ವಿದ್ಯಾರ್ಥಿನಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿರುವ ಮಾಹಿತಿ ಲಭ್ಯವಾಗಿದೆ.