ಹಾವೇರಿ: ಪರ ಪುರುಷನ ಜತೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಅಕ್ಕನನ್ನು ತಮ್ಮ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹಾವೇರಿ (Haveri News) ಜಿಲ್ಲೆಯ ಶಿಗ್ಗಾವಿಯಲ್ಲಿ ನಡೆದಿದೆ. ಸುಮಾ ಶಿವಶಂಕರ್ ವನಹಳ್ಳಿ (29) ಕೊಲೆಯಾದ ಮಹಿಳೆ.
ಸುಮಾ ಶಿಗ್ಗಾವಿ ಪಟ್ಟಣದ ಮೌಲಾಲಿ ಗುಡ್ಡದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಆಯಾ ಕೆಲಸ ಮಾಡಿಕೊಂಡಿದ್ದಳು. ಬೆಳಗ್ಗೆ ತಮ್ಮ ಸಂಜು ಮಚ್ಚಿನಿಂದ ಸುಮಾಳ ಕುತ್ತಿಗೆ ಹಾಗೂ ಕೈಗೆ ಭೀಕರ ಹಲ್ಲೆ ಮಾಡಿದ್ದಾನೆ. ಇದರಿಂದ ಸುಮಾಳ ಕೈ ತುಂಡಾಗಿದ್ದು, ಕುತ್ತಿಗೆಗೂ ಗಂಭೀರ ಗಾಯಗಳಾದ ಹಿನ್ನೆಲೆ ಸುಮಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನಾ ಸ್ಥಳಕ್ಕೆ ಶಿಗ್ಗಾವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟ್ಯೂಷನ್‌ಗೆ ತೆರಳಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಗದಗ: ಕಂಪ್ಯೂಟರ್ ಕ್ಲಾಸ್‌ಗೆ ಹೋಗಿದ್ದ ಬಾಲಕಿಯನ್ನ ಪುಸಲಾಯಿಸಿ, ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 17 ವರ್ಷದ ಬಾಲಕಿ ಮೇಲೆ ಅಲ್ಲಾಭಕ್ಷಿ ಕೊಪ್ಪದ ಎಂಬ ಆರೋಪಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
Bhatkal Tragedy: ಭಟ್ಕಳದ ತಟ್ಟಿಹಕ್ಕಲ ನದಿ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಎರಡು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ಮೇಲೆ ಆರೋಪಿ 2ನೇ ಬಾರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಪ್ರಕರಣ ದಾಖಲಾಗಿದೆ. ಈ ಹಿಂದೆ 2025 ರಲ್ಲಿ ಇದೆ ಬಾಲಕಿಯಿಂದ, ಆರೋಪಿ ಮೇಲೆ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆಗ ಆರೋಪಿ ಅಲ್ಲಾಭಕ್ಷಿ ಪೋಕ್ಸೋ ಕೇಸ್ ಮೇಲೆ ಜೈಲು ಸೇರಿದ್ದ. ಜೈಲಿನಿಂದ ಹೊರಬಂದ ನಂತರ ಸೇಡು ತೊರಿಸಿಕೊಳ್ಳಲು ಅದೇ ಸಂತ್ರಸ್ತೆ ಮೇಲೆ 2ನೇ ಬಾರಿ ಕೃತ್ಯ ಎಸಗಿದ್ದಾನೆ.