ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

MLA Basavaraj Shivannavar: ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Basavaraj Shivannavar: ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಶುಕ್ರವಾರ ಬೆಳಗ್ಗೆ ಸಮಯದಲ್ಲಿ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಹುಬ್ಬಳ್ಳಿ ವಿಹಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಹೃದಯದಲ್ಲಿ ಸಮಸ್ಯೆ ಇರುವುದನ್ನು ಗುರುತಿಸಿ ಸ್ಟಂಟ್ ಅಳವಡಿಕೆ ಮಾಡಿದ್ದಾರೆ. ವೈದ್ಯರು ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ (ಸಂಗ್ರಹ ಚಿತ್ರ)

ಹಾವೇರಿ, ಫೆ.13: ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ (MLA Basavaraj Shivannavar) ಅವರಿಗೆ ಶುಕ್ರವಾರ ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಹುಬ್ಬಳ್ಳಿ ವಿಹಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫೆ.14ರಂದು ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಾಧನಾ ಸಮಾವೇಶ ಯಶಸ್ವಿಯಾಗಿ ನಡೆಸಲು ಅಧಿಕಾರಿಗಳೊಂದಿಗೆ ಹಾಗೂ ಸಚಿವರು, ಶಾಸಕರೊಂದಿಗೆ ನಿರಂತರ ಕೆಲಸದಲ್ಲಿ ತೊಡಗಿಕೊಂಡಿದ್ದರು.

Hampi Utsav 2026: ಹಂಪಿ ಉತ್ಸವದಲ್ಲಿ ಅಗ್ನಿ ಅವಘಡ; ಸಿಎಂ ಇದ್ದ ವೇದಿಕೆ ಎದುರೇ ಹೊತ್ತಿಕೊಂಡ ಬೆಂಕಿ

ಶುಕ್ರವಾರ ಬೆಳಗ್ಗೆ ಆರೋಗ್ಯದಲ್ಲಿ ಎದೆ ನೋವು, ಸುಸ್ತು ಕಾಣಿಸಿಕೊಂಡಿತ್ತು.ಇದರಿಂದ ತಕ್ಷಣವೇ ಹುಬ್ಬಳ್ಳಿಗೆ ತೆರಳಿ ವಿಹಾನ್ ಖಾಸಗಿ ಆಸ್ಪತ್ರೆ ದಾಖಲಾಗಿದ್ದಾರೆ. ಚಿಕಿತ್ಸೆ ನೀಡಿರುವ ವೈದ್ಯರು ಹೃದಯದಲ್ಲಿ ಸಮಸ್ಯೆ ಇರುವುದನ್ನು ಗುರುತಿಸಿ, ಸ್ಟಂಟ್ ಅಳವಡಿಕೆ ಮಾಡಿದ್ದಾರೆ. ಶಾಸಕರಿಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.