ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Women's Reservation Bill: ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ ಎಂದ ಸಿಎಂ

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ ಎಂದ ಸಿಎಂ

ಸಿಎಂ ಸಿದ್ದರಾಮಯ್ಯ. -

Prabhakara R
Prabhakara R Apr 19, 2026 4:23 PM

ರಾಣೆಬೆನ್ನೂರು (ಹಾವೇರಿ): ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಅವರು ಇಂದು ರಾಣೆಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ , ಸಂವಿಧಾನದ 73,74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ

ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ದಕ್ಷಿಣದಲ್ಲಿ 50% ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ಅದರ ಪರವಾಗಿದ್ದೇವೆ ಎಂದರು.

ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. 50% ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು ಎಂದರು. ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದರು.

ಪ್ರಧಾನಮಂತ್ರಿಗಳಿಂದ ರಾಜಕೀಯ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡು , ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ರಾಜಕೀಯ ಮಾಡುತ್ತಿದ್ದಾರೆ ಎಂದರು.

450 ಮತಗಳನ್ನು ಪಡೆದು ಅಂಗೀಕಾರವಾಗಿರುವ ಮಸೂದೆಯನ್ನು ಮೋದಿಯವರು ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ತಂದಿದ್ದರೆ, ಯಾರೂ ವಿರೋಧಿಸುತ್ತಿರಲಿಲ್ಲ. ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ ಎಂದರು.

ಮೇಲ್ಮನವಿಗೆ ಅವಕಾಶ

ಜನಪ್ರತಿನಿಧಿಗಳು ಜೈಲು ಸೇರುತ್ತಿರುವುದರ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದರು.

ಮಟ್ಕಾ ದಂಧೆ ನಿಯಂತ್ರಣದಲ್ಲಿದೆ

ರಾಣೆಬೆನ್ನೂರು ಸುತ್ತ ಮುತ್ತ ಮಟ್ಕಾ ದಂಧೆ ವ್ಯಾಪಕವಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಸ್ಥಳೀಯ ಶಾಸಕರು ಕ್ರಮ ಕೈಗೊಂಡಿದ್ದಾರೆ ಎಂದರು. ಪ್ರಸ್ತುತ ಮಟ್ಕಾ ದಂಧೆ ನಿಯಂತ್ರಣದಲ್ಲಿದೆ ಎಂದರು.

Women Reservation Bill: ಮಹಿಳಾ ಮೀಸಲಾತಿ ಮಸೂದೆ ತಿರಸ್ಕರಿಸಿದ ಕಾಂಗ್ರೆಸ್ ವಿರುದ್ಧ ಆಕ್ರೋಶ

ರಾಣೆಬೆನ್ನೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

_Siddaramaiah in Haveri  (1)

ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ವೇಳೆ ಸ್ಥಳೀಯ ಶಾಸಕ ಪ್ರಕಾಶ ಕೋಳಿವಾಡ, ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕ ಬಸವರಾಜ ಶಿವಣ್ಣನವರ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ, ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ, ಎಸ್ಪಿ ಯಶೋಧಾ ವಂಟಗೋಡಿ, ಸಿಇಓ ರುಚಿ ಬಿಂದಾಲ್ ಸೇರಿದಂತೆ ಅನೇಕ ಅಧಿಕಾರಿಗಳು ಮುಖಂಡರು ಹಾಜರಿದ್ದರು.