ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Haveri News: ದೇವಗಿರಿ ಗ್ರಾ.ಪಂ. ಪಿಡಿಒ ಸುನಿತಾ ಗರಡಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ

Haveri News: ಹಾವೇರಿ ನಗರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದೇವಗಿರಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುನೀತಾ ಗರಡಿ ಅವರಿಗೆ ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದೇವಗಿರಿ ಗ್ರಾ.ಪಂ. ಪಿಡಿಒ ಸುನಿತಾ ಗರಡಿಗೆ ಸರ್ವೋತ್ತಮ ಪ್ರಶಸ್ತಿ.

ಹಾವೇರಿ, ಜು.6: ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಾವೇರಿ ನಗರದಲ್ಲಿ (Haveri News) ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದೇವಗಿರಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುನೀತಾ ಗರಡಿ ಅವರಿಗೆ ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪರಿಣಾಮಕಾರಿ ಅನುಷ್ಠಾನ, ಜನಸ್ನೇಹಿ ಆಡಳಿತ, ಪಾರದರ್ಶಕ ಕಾರ್ಯನಿರ್ವಹಣೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ, ಸರ್ವೋತ್ತಮ ಪ್ರಶಸ್ತಿಯನ್ನು ಪಿಡಿಒ ಸುನೀತಾ ಗರಡಿ ಅವರಿಗೆ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು, ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪಿಡಿಓ ಸುನೀತಾ ಗರಡಿ, ʼಈ ಗೌರವವು ನನ್ನೊಬ್ಬಳಿಗೆ ಮಾತ್ರವಲ್ಲ, ನನ್ನೊಂದಿಗೆ ಕಾರ್ಯನಿರ್ವಹಿಸಿದ ಸಹೋದ್ಯೋಗಿಗಳು ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿಯ ಸಹಕಾರದ ಫಲವಾಗಿದೆ. ಮುಂದಿನ ದಿನಗಳಲ್ಲಿಯೂ ಜನಪರ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಇನ್ನಷ್ಟು ಶ್ರಮವಹಿಸುತ್ತೇನೆʼ ಎಂದು ತಿಳಿಸಿದರು.

ಜಾಗತಿಕ ಅನಿಶ್ಚಿತತೆ ನಡುವೆಯೇ ಅತಿ ವೇಗದ ಆರ್ಥಿಕ ಬೆಳವಣಿಗೆ ದಾಖಲಿಸಿದ ಭಾರತ; 2028ಕ್ಕೆ ಜಿಡಿಪಿ ಶೇ.7.2 ತಲುಪುವ ಅಂದಾಜು

ಸುನಿತಾ ಗರಡಿ ಅವರ ಈ ಸಾಧನೆಗೆ ಸಹೋದ್ಯೋಗಿಗಳು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಅಭಿನಂದನೆ ಸಲ್ಲಿಸಿದ್ದು, ಹಾವೇರಿ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ ವಿಧಾನಸಭೆ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ,‌ ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಮಲ್ಲೇಶಪ್ಪ ಕರಿಗಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಜಿಪಂ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಎಸ್.ಬಸವರಾಜ, ಮಲ್ಲಿಕಾರ್ಜುನ ಬಳ್ಳಾರಿ, ಡಾ.ಬಸವರಾಜ ಬಳ್ಳಾರಿ, ಎಸ್.ಎಫ್ ಸಿದ್ದನಗೌಡ್ರ, ಲೋಕೇಶ, ಅಂಬಿಗೇರ, ದಾವಲಸಾಬ ಕಮಗಾಲ, ಜಿ.ಎಸ್ ಪಾಟೀಲ, ಮುನೀಶ್ವರ ಚೂರಿ ಸೇರಿದಂತೆ ಮೂರು ಜಿಲ್ಲೆಯ ಪದಾಧಿಕಾರಿಗಳು, ರಾಜ್ಯ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.