ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLC Election 2026: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ; ಹಾವೇರಿಯಲ್ಲಿ ಶೇ.75.81ರಷ್ಟು ಮತದಾನ

Haveri News: ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನ ಹಾವೇರಿ ಜಿಲ್ಲೆಯಲ್ಲಿ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಸಂಜೆ 4 ಗಂಟೆಯ ವೇಳೆಗೆ ಶೇ.75.81ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ.

ಹಾವೇರಿ, ಅ.23: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ (MLC Election 2026) ಮತದಾನ ಹಾವೇರಿ ಜಿಲ್ಲೆಯಲ್ಲಿ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಸಂಜೆ 4 ಗಂಟೆಯ ವೇಳೆಗೆ ಶೇ.75.81ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ.

ಜಿಲ್ಲೆಯ ಹಾವೇರಿ, ಬ್ಯಾಡಗಿ ಸೇರಿದಂತೆ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಮತದಾನ ವ್ಯವಸ್ಥಿತವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆಗಳಿಲ್ಲದೆ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಅವರು ಮಾಹಿತಿ ನೀಡಿದರು.

ಸಮಯ ಕಳೆದಂತೆ ಹೆಚ್ಚಿದ ಮತದಾನ

ಬೆಳಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ಶೇ.28.37ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 2 ಗಂಟೆಯ ವೇಳೆಗೆ ಈ ಪ್ರಮಾಣ ಶೇ.53.06ಕ್ಕೆ ಏರಿಕೆಯಾಗಿದ್ದು, ಸಂಜೆ 4 ಗಂಟೆಗೆ ಶೇ.75.81ರಷ್ಟು ಮತದಾನ ದಾಖಲಾಗಿದೆ.

ಮೋಡ ಕವಿದ ವಾತಾವರಣ, ಮಳೆಯ ನಡುವೆಯೂ ಮತದಾನ

ಜಿಲ್ಲೆಯ ವಿವಿಧೆಡೆ ಮೋಡ ಕವಿದ ತಂಪಾದ ವಾತಾವರಣ ಮತದಾರರಿಗೆ ಅನುಕೂಲಕರವಾಗಿತ್ತು. ಬೆಳಗಿನ ಅವಧಿಯಲ್ಲಿ ಕೆಲವು ಮತಗಟ್ಟೆಗಳಲ್ಲಿ ಮತದಾನ ನಿಧಾನಗತಿಯಲ್ಲಿ ನಡೆದರೂ, ನಂತರ ಚುರುಕು ಪಡೆದುಕೊಂಡಿತು. ಮಧ್ಯಾಹ್ನ ಹಾವೇರಿ, ಶಿಗ್ಗಾಂವಿ ಸೇರಿದಂತೆ ವಿವಿಧೆಡೆ ಮಳೆಯಾದರೂ ಮತದಾನದ ಪ್ರಕ್ರಿಯೆ ಮುಂದುವರಿಯಿತು. ಹಾವೇರಿ, ಶಿಗ್ಗಾಂವಿ, ರಾಣೇಬೆನ್ನೂರು ಸೇರಿದಂತೆ ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಪದವೀಧರ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.‌

MLC Election 2026: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ; ಬೀದರ್‌ ಜಿಲ್ಲೆಯಲ್ಲಿ ಶೇ. 86.47 ಮತದಾನ ದಾಖಲು

ಅ.27ಕ್ಕೆ ಮತ ಎಣಿಕೆ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಅಕ್ಟೋಬರ್ 27ರಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ.