ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ

Self Harming: ಒಂದು ಸೆಮಿಸ್ಟರ್‌ ಫೇಲ್‌ ಆಗಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Self Harming: ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ಘಟನೆ ನಡೆದಿದೆ. ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ, ನಾಲ್ಕನೇ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಎಕ್ಸಾಂ ಫೇಲ್‌ ಆಗಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Profile Prabhakara R Mar 4, 2025 3:51 PM

ಹಾವೇರಿ: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿ ಉಲ್ಲಾಸ್‌ (21)ಮೃತ ವಿದ್ಯಾರ್ಥಿ.

ಸರಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದಲ್ಲಿ ಓದುತ್ತಿದ್ದ ಉಲ್ಲಾಸ್‌, ನಾಲ್ಕನೇ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ ಫೇಲ್ ಆಗಿದ್ದ. ಈ ಹಿನ್ನೆಲೆಯಲ್ಲಿ ಮನನೊಂದು ದೇವಗಿರಿ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೆರೆಯ ದಡದಲ್ಲಿ ಉಲ್ಲಾಸ್‌ ವಾಚ್ ಪತ್ತೆಯಾಗಿತ್ತು. ಹೀಗಾಗಿ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಉಲ್ಲಾಸ್‌ ಶವ ಪತ್ತೆಯಾಗಿದೆ. ಹಾವೇರಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Haveri News: ಬಸ್ ಡಿಕ್ಕಿಯಾಗಿ ಹಾವೇರಿ ಪೊಲೀಸ್‌ ಶ್ವಾನ ʼಕನಕʼ ಸಾವು: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಪ್ರೀತಿಸಿ ಸಿಐಎಸ್ಎಫ್ ಮಹಿಳಾ ಅಧಿಕಾರಿ ಮೋಸ; ಮಂಗಳೂರಿನ ಲಾಡ್ಜ್‌ನಲ್ಲಿ ಉತ್ತರ ಪ್ರದೇಶದ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿ ತನ್ನನ್ನು ಪ್ರೀತಿಸಿ, ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ಮಂಗಳೂರಿನ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು ಉತ್ತರ ಪ್ರದೇಶದ ಗಾಜಿಪುರ ನಿವಾಸಿ, ಚೆನ್ನೈಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಅಭಿಷೇಕ್ ಸಿಂಗ್ (40) ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನ ರಾವ್ ಅಂಡ್ ರಾವ್ ಸರ್ಕಲ್‌ನಲ್ಲಿರುವ ಲಾಡ್ಜ್‌ನಲ್ಲಿ ಎರಡು ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೃತ್ಯಕ್ಕೂ ಮುನ್ನ ಸುದೀರ್ಘ 20 ನಿಮಿಷಗಳ ವಿಡಿಯೊ ಮಾಡಿದ್ದು, ತನ್ನ ಸಾವಿಗೆ ಮಹಿಳಾ ಅಧಿಕಾರಿಯೇ ಕಾರಣ ಎಂದು ಹೇಳಿ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.

ಈ ಸುದ್ದಿಯನ್ನೂ ಓದಿ | Tumkur News: ಸಾಕುನಾಯಿಯನ್ನು ಸದ್ದಿಲ್ಲದಂತೆ ಹೊತ್ತೊಯ್ದ ಚಿರತೆ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಹರಿಬಿಟ್ಟಿದ್ದು, ಅದರಲ್ಲಿ ಮೋನಿಕಾ ಸಿಹಾಗ್ ಅವರು ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್‌ಗೆ ಈಗಾಗಲೇ ಮರುವೆಯಅಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ಅಭಿಷೇಕ್ ಸಿಂಗ್ ಜತೆ ಸಂಬಂಧ ಬೆಳೆಸಿದ್ದರು ಎನ್ನಲಾಗಿದೆ. ಪ್ರೀತಿಯ ನೆಪದಲ್ಲಿ ತನಗೆ ಮೋಸ ಮಾಡಿದ್ದಾಳೆ. ತನ್ನಿಂದ ದೈಹಿಕ ಸುಖ, ಆರ್ಥಿಕ ಲಾಭ ಪಡೆದು ಮೋಸ ಮಾಡಿದ್ದಾಳೆ. ಹಾಗಯೇ ಹಲವರ ಜತೆಗೆ ಇದೇ ರೀತಿಯ ಸಂಬಂಧ ಇಟ್ಟುಕೊಂಡಿರುವುದು ತಿಳಿದುಬಂದಿದೆ. ಮೋನಿಕಾಗೆ
8 ಲಕ್ಷದಷ್ಟು ಮೌಲ್ಯದ ಚಿನ್ನಾಭರಣ ತೆಗೆದುಕೊಟ್ಟಿದ್ದೇನೆ ಎಂದು ವಿಡಿಯೊದಲ್ಲಿ ಆರೋಪಿಸಿದ್ದಾನೆ. ಮೋನಿಕಾ ಸಿಂಗ್, ಗುಜರಾತಿನ ಅಹಮದಾಬಾದ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ ಎಂದು ಅಭಿಷೇಕ್ ಹೇಳಿದ್ದಾನೆ. ಘಟನೆ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.