ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ವಿಫಲ: ಹಾವೇರಿ ಬಂದ್‌ಗೆ ವಿದ್ಯಾರ್ಥಿಗಳಿಂದಲೂ ಬೆಂಬಲ

Haveri Bandh: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ಘೋಷಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಆಕ್ರೋಶ ರೈತರಲ್ಲಿ ಭುಗಿಲೆದ್ದಿದ್ದು ಶನಿವಾರ ಹಾವೇರಿ ನಗರದಲ್ಲಿ ಬಂದ್ ಕಿಚ್ಚು ಜೋರಾಗಿದೆ. ಕಬ್ಬಿನ ಬೆಂಬಲ ಬೆಲೆ ವಿಚಾರವನ್ನು 29ರೊಳಗೆ ಬಗೆಹರಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಭರವಸೆ ನೀಡಲಾಗಿತ್ತು. ಆದರೆ ಇದನ್ನು ಈಡೇರಿಸುವಲ್ಲಿ ವಿಫಲವಾಗಿದ್ದರಿಂದ ಬಂದ್‌ ನಡೆಸಲಾಗಿದೆ.

ಹಾವೇರಿಯಲ್ಲಿ ಅಂಗಡಿಗಳನ್ನು ಬಂದ್‌ ಮಾಡಲಾಯಿತು

ಹಾವೇರಿ, ಅ. 31: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ಘೋಷಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಆಕ್ರೋಶ ರೈತರಲ್ಲಿ ಭುಗಿಲೆದ್ದಿದ್ದು, ಶನಿವಾರ (ಅಕ್ಟೋಬರ್‌ 31) ಹಾವೇರಿ ನಗರದಲ್ಲಿ ಬಂದ್ ಕಿಚ್ಚು ಜೋರಾಗಿದೆ. ಕಬ್ಬಿನ ಬೆಂಬಲ ಬೆಲೆ ವಿಚಾರವನ್ನು 29ರೊಳಗೆ ಬಗೆಹರಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಭರವಸೆ ನೀಡಲಾಗಿತ್ತು. ಆದರೆ ನಿಗದಿತ ಅವಧಿಯಲ್ಲಿ ಬೆಲೆ ಘೋಷಣೆ ಮಾಡದೆ ಸಕ್ಕರೆ ಕಾರ್ಖಾನೆಗಳ ಕಾರ್ಯಾರಂಭಕ್ಕೆ ಅವಕಾಶ ನೀಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ಖಂಡಿಸಿ ರೈತ ಮುಖಂಡರಾದ ಚೂನ್ನಪ್ಪ ಪೂಜಾರಿ ಹಾಗೂ ಶಶಿಕಾಂತ ಗುರೂಜಿ ನೇತೃತ್ವದಲ್ಲಿ ರಾಜ್ಯ ಬಂದ್ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ನೀಡಲಾಗಿತ್ತು. ಇದರ ಪರಿಣಾಮ ಹಾವೇರಿಯಲ್ಲಿ ಬೆಳಗ್ಗೆಯಿಂದಲೇ ಪ್ರತಿಭಟನೆಯ ಕಾವು ಹೆಚ್ಚಾಯಿತು.

ಬೆಳಿಗ್ಗೆ 8 ಗಂಟೆಯಿಂದಲೇ ರೈತರು ಹಾಗೂ ರೈತ ಸಂಘಟನೆಗಳ ಮುಖಂಡರು ನಗರದ ವಿವಿಧ ಪ್ರದೇಶಗಳಿಗೆ ತೆರಳಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವ ಮೂಲಕ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಬಂದ್‌ಗೆ ಸಹಕರಿಸದ ಕೆಲವು ಅಂಗಡಿಗಳಿಗೂ ತೆರಳಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸುವಂತೆ ಆಗ್ರಹಿಸಿದರು. ವಿದ್ಯಾರ್ಥಿಗಳೂ ರೈತರ ಹೋರಾಟಕ್ಕೆ ಸಾಥ್ ನೀಡಿದರು.

ರಾಜ್ಯೋತ್ಸವ ನಿಮಿತ್ತ ದೆಹಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಕಬ್ಬು ಬೆಳೆಗಾರರ ಹಿತ ಕಾಪಾಡಬೇಕು, ರೈತರಿಗೆ ನ್ಯಾಯಯುತ ಬೆಲೆ ಘೋಷಿಸಬೇಕು ಎಂಬ ಆಗ್ರಹ ಪ್ರತಿಭಟನೆಯಲ್ಲಿ ಮೊಳಗಿತು. ಬಂದ್ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳು, ರಸ್ತೆ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಸರ್ಕಾರದ ಭರವಸೆಯ ಹೊರತಾಗಿಯೂ ಕಬ್ಬಿನ ಬೆಲೆ ಘೋಷಣೆಯಾಗದಿರುವುದು ರೈತರನ್ನು ಬೀದಿಗಿಳಿಯುವಂತೆ ಮಾಡಿದ್ದು, ಹಾವೇರಿಯಲ್ಲಿ ಬಂದ್ ಚಳವಳಿ ತೀವ್ರ ಸ್ವರೂಪ ಪಡೆದುಕೊಂಡಿದೆ.

ಏನಿದು ಬೇಡಿಕೆ?

ಪ್ರತಿ ಟನ್ ಕಬ್ಬಿಗೆ ರಾಜ್ಯ ಸರ್ಕಾರ 1 ಸಾವಿರ ರೂಪಾಯಿ ಬೆಂಬಲ ಬೆಲೆ ನೀಡಬೇಕು, ಕೇಂದ್ರದ ಎಂಎಸ್‌ಪಿ ಸೇರಿ ಒಟ್ಟಾರೆ 5,500 ರೂಪಾಯಿ ನೀಡಬೇಕು. ಕೇಂದ್ರ ಸಕ್ಕರೆ ಕೆಜಿಗೆ ಎಂಎಸ್‌ಪಿಯನ್ನು 50 ರೂಪಾಯಿ ಹೆಚ್ಚಿಸುವಂತೆ ಆಗ್ರಹಿಸಿ ರೈತರು ಹಲವಾರು ದಿನಗಳಿಂದ ಬೀದಿಗಿಳಿದಿದ್ದಾರೆ. ಇದಾದ ನಂತರ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜತೆ ರೈತ ಮುಖಂಡರ ಸಭೆ ನಂತರ ಸರ್ಕಾರಕ್ಕೆ ಸಮಸ್ಯೆ ಪರಿಹರಿಸಲು ಗಡುವು ನೀಡಲಾಗಿತ್ತು.

ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದಿದ್ರೆ ಅಧಿಕಾರದಲ್ಲಿ ಇರೋದೇಕೆ?; ಆರ್‌. ಅಶೋಕ್‌ ಕಿಡಿ

ರಾಜ್ಯ ಬಂದ್‌ಗೆ ಕರೆ

ಕಬ್ಬು ಬೆಳೆಗಾರರ ಹೋರಾಟಕ್ಕೆ ಬೆಂಬಲ ಸೂಚಿಸುವ ಉದ್ದೇಶದಿಂದ ಶನಿವಾರ ಕರ್ನಾಟಕದ ಪ್ರತಿಯೊಂದು ಹಳ್ಳಿ, ಪಟ್ಟಣ ಹಾಗೂ ನಗರಗಳಲ್ಲಿ ಸ್ವಯಂಪ್ರೇರಿತವಾಗಿ ಬಂದ್ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಕರೆ ನೀಡಿದ್ದಾರೆ. ಶುಕ್ರವಾರ ಸಂಜೆ ಬೆಳಗಾವಿಯ ಗುರ್ಲಾಪೂರ ಕ್ರಾಸ್‌ನಲ್ಲಿ ನಡೆದ ರೈತರ ಹೋರಾಟದ ವೇದಿಕೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author