ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹಾವೇರಿಯ ಚಿಕ್ಕ ಕಬ್ಬಾರದಲ್ಲಿ ಅಗ್ನಿ ಅವಘಡ: 112 ಭತ್ತದ ಹುಲ್ಲಿನ ಪೆಂಡಿಗಳು ಭಸ್ಮ

Haveri News: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಕಬ್ಬಾರ ಗ್ರಾಮದ ಮುಖ್ಯ ರಸ್ತೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಭತ್ತದ ಹುಲ್ಲಿನ ಪೆಂಡಿಗಳಿಗೆ ಬೆಂಕಿ ಹೊತ್ತಿಕೊಂಡು, ಸುಮಾರು 112 ಪೆಂಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಜರುಗಿದೆ.

ಚಿಕ್ಕ ಕಬ್ಬಾರದಲ್ಲಿ ಅಗ್ನಿ ಅವಘಡ: 112 ಭತ್ತದ ಹುಲ್ಲಿನ ಪೆಂಡಿಗಳು ಭಸ್ಮ

-

Profile
Siddalinga Swamy Nov 23, 2026 9:55 PM

ಹಾವೇರಿ, ನ.23: ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಭತ್ತದ ಹುಲ್ಲಿನ ಪೆಂಡಿಗಳಿಗೆ ಬೆಂಕಿ ಹೊತ್ತಿಕೊಂಡು, ಸುಮಾರು 112 ಪೆಂಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ (Haveri News) ರಟ್ಟಿಹಳ್ಳಿ ತಾಲೂಕಿನ ಚಿಕ್ಕ ಕಬ್ಬಾರ ಗ್ರಾಮದ ಮುಖ್ಯ ರಸ್ತೆಯಲ್ಲಿ ಜರುಗಿದೆ. ದೂದಿಹಳ್ಳಿ ಗ್ರಾಮದ ರೈತ ಚಂದ್ರಪ್ಪ ಬಸಪ್ಪ ಚಿನ್ನಿಕಟ್ಟಿ, ಹೊಳೆಹರಳಳ್ಳಿ ಗ್ರಾಮದಿಂದ ಭತ್ತದ ಹುಲ್ಲನ್ನು ಟ್ರ್ಯಾಕ್ಟರ್ ಮೂಲಕ ಸಾಗಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಸುಮಾರು 112 ಪೆಂಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಿಕ್ಕ ಕಬ್ಬಾರ ಗ್ರಾಮದ ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ, ಕಮಲಾಪುರ ರಸ್ತೆಯ ಪಕ್ಕದ ಹೊಲಕ್ಕೆ ಹುಲ್ಲಿನ ಪೆಂಡಿಗಳನ್ನು ಕೆಳಗಿಳಿಸಿ ಟ್ರ್ಯಾಕ್ಟರ್ ಹಾಗೂ ಚಾಲಕನನ್ನು ರಕ್ಷಿಸಿದ್ದಾರೆ. ಅಗ್ನಿ ಅವಘಡದಿಂದಾಗಿ ಸುಮಾರು 112 ಪೆಂಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ ಎಂದು ತಿಳಿದುಬಂದಿದೆ.

ರೈತನಿಗೆ ಅಪಾರ ಆರ್ಥಿಕ ನಷ್ಟ ಉಂಟಾಗಿದ್ದು, ರಸ್ತೆಗೆ ಅಡ್ಡಲಾಗಿ ಹಾದುಹೋಗಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸುವಂತೆ ಗ್ರಾಮಸ್ಥರು ವಿದ್ಯುತ್ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.