ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bus Accident: ಹಾವೇರಿಯಲ್ಲಿ ಖಾಸಗಿ ಬಸ್‌ ಪಲ್ಟಿಯಾಗಿ ಇಬ್ಬರು ಸಾವು

ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆ ಹೊರಟಿದ್ದ ಬಸ್‌ಗೆ ಮೊಟೇಬೆನ್ನೂರು ಗ್ರಾಮದ ಬಳಿ‌ ಕಾರು ಇದ್ದಕ್ಕಿದ್ದಂತೆ ಅಡ್ಡ ಬಂದಿತ್ತು. ಕಾರಿಗೆ ಗುದ್ದಿ ಅಪಘಾತವಾಗುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕ ಬ್ರೇಕ್ ಹಾಕಿದ್ದಾನೆ. ಪರಿಣಾಮ ಬಸ್‌ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿ ಬಿದ್ದಿದೆ.

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದುದರಿಂದ (Bus Accident) ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿ 6 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹಾವೇರಿ (Haveri news) ಜಿಲ್ಲೆ ಬ್ಯಾಡಗಿ ತಾಲ್ಲೂಕು ಮೊಟೇಬೆನ್ನೂರು ಬಳಿ ಮಂಗಳವಾರ ಬೆಳಗಿನ ಸಮಯದಲ್ಲಿ ನಡೆದಿದೆ. 29 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೃತರನ್ನು ಅರ್ನವಿ (11), ಯಶ್ (20) ಎಂದು ಗುರುತಿಸಲಾಗಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆ ಹೊರಟಿದ್ದ ಬಸ್‌ಗೆ ಮೊಟೇಬೆನ್ನೂರು ಗ್ರಾಮದ ಬಳಿ‌ ಕಾರು ಇದ್ದಕ್ಕಿದ್ದಂತೆ ಅಡ್ಡ ಬಂದಿತ್ತು. ಕಾರಿಗೆ ಗುದ್ದಿ ಅಪಘಾತವಾಗುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕ ಬ್ರೇಕ್ ಹಾಕಿದ್ದಾನೆ. ಪರಿಣಾಮ ಬಸ್‌ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿ ಬಿದ್ದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಹಾಗೂ ಎಸ್ಪಿ ಯಶೋದಾ ವಂಟಗೋಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸತತ ಒಂದುವರೆ ಗಂಟೆಗಳ ಕಾರ್ಯಾಚರಣೆ ನಡೆಸಿ ಬಸ್ ಮೇಲಕ್ಕೆ ಎತ್ತಲಾಯಿತು. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಾಳುಗಳ ರಕ್ಷಣಾ ಕಾರ್ಯ ಮಾಡಿದ್ದು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಹಲವು ಪುಟ್ಟ ಮಕ್ಕಳಿಗೂ ಗಂಭೀರ ಗಾಯಗಳು ಆಗಿವೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Road Accident: ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ ಅಪಘಾತ, ಇಬ್ಬರ ದುರ್ಮರಣ

ಹರೀಶ್‌ ಕೇರ

View all posts by this author