ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Haveri News: ಕಜ್ಜರಿ ಪ್ಲಾಟ್ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ; ಸಮಸ್ಯೆ ಪರಿಹರಿಸಲು ಗ್ರಾಮಸ್ಥರ ಆಗ್ರಹ

Haveri News: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸಮೀಪದ ಕಜ್ಜರಿ ಪ್ಲಾಟ್ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ತೀವ್ರವಾಗುತ್ತಿದ್ದು, ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು ಗ್ರಾಮಸ್ಥರ ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಾಣೆಬೆನ್ನೂರು ತಾಲೂಕಿನ ಸಮೀಪದ ಕಜ್ಜರಿ ಪ್ಲಾಟ್ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ.

ಹಾವೇರಿ, ಮಾ.3: ಜಿಲ್ಲೆಯ (Haveri News) ರಾಣೆಬೆನ್ನೂರು ತಾಲೂಕಿನ ಸಮೀಪದ ಕಜ್ಜರಿ ಪ್ಲಾಟ್ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ತೀವ್ರವಾಗುತ್ತಿದ್ದು, ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ಬಾರಿ ಮನವಿ ಸಲ್ಲಿಸಿದರೂ ಗ್ರಾಮ ಪಂಚಾಯತಿ ಆಡಳಿತದಿಂದ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದಲ್ಲಿ ಸರಿಯಾದ ನೀರು ಪೂರೈಕೆ ವ್ಯವಸ್ಥೆ ಇಲ್ಲದ ಕಾರಣ ಜನರು ಕಿಲೋಮೀಟರ್‌ಗಟ್ಟಲೆ ದೂರ ನಡೆದು ಕುಡಿಯುವ ನೀರು ತರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೀರಿನ ಬೇಡಿಕೆ ಮತ್ತಷ್ಟು ಏರಿಕೆಯಾಗಿದ್ದು, ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಮೂಲಸೌಕರ್ಯಗಳ ಕೊರತೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ಗ್ರಾಮದಲ್ಲಿ ಚರಂಡಿ ವ್ಯವಸ್ಥೆಯೂ ದುಸ್ಥಿತಿಯಲ್ಲಿದ್ದು, ಆರೋಗ್ಯ ಸಮಸ್ಯೆಗಳ ಭೀತಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ವಿದ್ಯುತ್‌ ಸಂಬಂಧಿತ ದೂರುಗಳಿಗೆ 1912 ಅಥವಾ ವಾಟ್ಸ್‌ಆ್ಯಪ್‌ ಸಹಾಯವಾಣಿ ಬಳಸಿ: ಬೆಸ್ಕಾಂ

ತಕ್ಷಣವೇ ನೀರು ಪೂರೈಕೆ ವ್ಯವಸ್ಥೆ ಸುಧಾರಣೆ, ಕೆಟ್ಟುಹೋದ ಬೋರ್‌ವೆಲ್‌ಗಳ ದುರಸ್ತಿ ಮತ್ತು ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು ಗ್ರಾಮಸ್ಥರ ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.