ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹಾವೇರಿ ಜಿಲ್ಲಾದ್ಯಂತ ಗುರುಪೂರ್ಣಿಮೆ ಆಚರಣೆ; ಮಠಗಳಲ್ಲಿ ವಿಶೇಷ ಪೂಜೆ, ಗುರು ವಂದನೆ

Haveri News: ಹಾವೇರಿ ಜಿಲ್ಲೆಯಾದ್ಯಂತ ಬುಧವಾರ ಗುರುಪೂರ್ಣಿಮೆಯನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲೆಯ ವಿವಿಧ ಮಠಗಳಲ್ಲಿ ವಿಶೇಷ ಪೂಜೆ, ಪಾದಪೂಜೆ, ಗುರು ವಂದನೆ ಹಾಗೂ ಆಶೀರ್ವಚನ ಕಾರ್ಯಕ್ರಮಗಳು ನಡೆದಿದ್ದು, ಸಾವಿರಾರು ಭಕ್ತರು ಶ್ರೀಗಳ ದರ್ಶನ ಪಡೆದು ಆಶೀರ್ವಾದ ಪಡೆದರು.

ಹಾವೇರಿ ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ

ಹಾವೇರಿ ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಿಸಲಾಯಿತು. -

Profile
Siddalinga Swamy Jul 29, 2026 9:39 PM

ಹಾವೇರಿ, ಜು. 29: ಜಿಲ್ಲೆಯಾದ್ಯಂತ ಬುಧವಾರ ಗುರುಪೂರ್ಣಿಮೆಯನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲೆಯ (Haveri News) ವಿವಿಧ ಮಠಗಳಲ್ಲಿ ವಿಶೇಷ ಪೂಜೆ, ಪಾದಪೂಜೆ, ಗುರು ವಂದನೆ ಹಾಗೂ ಆಶೀರ್ವಚನ ಕಾರ್ಯಕ್ರಮಗಳು ನಡೆದಿದ್ದು, ಸಾವಿರಾರು ಭಕ್ತರು ಶ್ರೀಗಳ ದರ್ಶನ ಪಡೆದು ಆಶೀರ್ವಾದ ಪಡೆದರು.

ಜಿಲ್ಲೆಯ ಹೆಸರಾಂತ ಹುಕ್ಕೇರಿ ಮಠದ ಶ್ರೀ ಸದಾಶಿವ ಮಹಾಸ್ವಾಮೀಜಿ ಹಾಗೂ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರಿಗೆ ಭಕ್ತರು ಗುರುಗೌರವ ಸಲ್ಲಿಸಿದರು. ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪುಷ್ಪಾರ್ಚನೆ, ಫಲ-ಪುಷ್ಪ ಸಮರ್ಪಣೆ ಹಾಗೂ ಮಂಗಳಾರತಿ ನೆರವೇರಿಸಲಾಯಿತು.

ಗುರುಪೂರ್ಣಿಮೆ ಅಂಗವಾಗಿ ಶ್ರೀಗಳು ಭಕ್ತರಿಗೆ ಧರ್ಮ, ಸಂಸ್ಕೃತಿ, ಮಾನವೀಯ ಮೌಲ್ಯಗಳು ಹಾಗೂ ಸದಾಚಾರದ ಬದುಕಿನ ಮಹತ್ವವನ್ನು ತಿಳಿಸಿ ಆಶೀರ್ವಚನ ನೀಡಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು, ಜನಪ್ರತಿನಿಧಿಗಳು, ಗಣ್ಯರು ಹಾಗೂ ಸಮಾಜದ ಮುಖಂಡರು ಶ್ರೀಗಳ ಆಶೀರ್ವಾದ ಪಡೆದರು. ಮಠಗಳ ಆವರಣದಲ್ಲಿ ಭಜನೆ, ಧಾರ್ಮಿಕ ಪ್ರವಚನ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.

ಗುರು ಪೂರ್ಣಿಮಾ 2026: ಏಕೆ ಆಚರಿಸುತ್ತಾರೆ? ಪೂಜೆ ವಿಧಾನ, ಮಹತ್ವ ಮತ್ತು ಮಂತ್ರ ತಿಳಿಯಿರಿ!

ಶರಣರ ತತ್ವ, ಭಾರತೀಯ ಸಂಸ್ಕೃತಿ ಹಾಗೂ ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ಸಾರುವ ಗುರುಪೂರ್ಣಿಮೆ ಹಬ್ಬವು ಜಿಲ್ಲೆಯಾದ್ಯಂತ ಅತ್ಯಂತ ಭಕ್ತಿ, ಶ್ರದ್ಧೆ ಮತ್ತು ವೈಭವದಿಂದ ಆಚರಿಸಲಾಯಿತು.