ಐಪಿಎಲ್​ ಸುನಿತಾ ವಿಲಿಯಮ್ಸ್​ ವಿದೇಶ ಫ್ಯಾಷನ್​ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Haveri News: ಹಾವೇರಿ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

Rain News: ಹಾವೇರಿ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಭಾರೀ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದ್ದು, ಜಿಲ್ಲೆಯ ಹಾನಗಲ್ಲ ತಾಲೂಕಿನ ಮಳವಳ್ಳಿಯಿಂದ ತಡಸ್ -ಶಿವಮೊಗ್ಗ ರಾಜ್ಯ ಹೆದ್ದಾರಿಯ ಅಕ್ಕಪಕ್ಕದ ಮರಗಳು ಮುರಿದು ಬಿದ್ದು ರಸ್ತೆ ಬಂದ್ ಆಗಿತ್ತು. ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು. ಸದ್ಯ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಹಾವೇರಿ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

Profile Siddalinga Swamy Mar 20, 2025 11:20 PM

ಹಾವೇರಿ: ಹಾವೇರಿ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಬಿರುಗಾಳಿ ಗುಡುಗು ಸಿಡಿಲು ಸಹಿತ ಆಲಿಕಲ್ಲು ಮಳೆ ಸುರಿದಿದೆ‌. ಭಾರೀ ಬಿರುಗಾಳಿ, ಮಳೆಯಿಂದ ಜಿಲ್ಲೆಯ (Haveri News) ಹಾನಗಲ್ಲ ತಾಲೂಕಿನ ಮಳವಳ್ಳಿಯಿಂದ ತಡಸ್ -ಶಿವಮೊಗ್ಗ ರಾಜ್ಯ ಹೆದ್ದಾರಿಯ ಅಕ್ಕಪಕ್ಕದ ಮರಗಳು ಮುರಿದು ಬಿದ್ದು ರಸ್ತೆ ಬಂದ್ ಆಗಿತ್ತು. ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು (Rain News). ಸ್ಥಳದಲ್ಲಿದ್ದ ಸಹಕಾರಿ ಇಲಾಖೆಯ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗುಡಿಕೇರಿ ಅವರು, ಸ್ಥಳೀಯರ ಸಹಕಾರದಿಂದ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಭಾರೀ ಬಿರುಗಾಳಿ, ಮಳೆಯಿಂದ ಹಾನಗಲ್ಲ ತಾಲೂಕಿನ ಮಳವಳ್ಳಿಯಿಂದ ತಡಸ್ -ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ಸಹಕಾರಿ ಇಲಾಖೆಯ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗುಡಿಕೇರಿ, ಗ್ರಾಮಸ್ಥರಾದ ವಿರುಪಣ್ಣ ದಾಳೇರ ಹಾಗೂ ಯಲ್ಲಪ್ಪ ಕರಬುಳ್ಳಿ ಅವರೊಂದಿಗೆ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ರಾಘವೇಂದ್ರ ಗುಡಿಕೇರಿ ಅವರ ಈ ಕಾರ್ಯಕ್ಕೆ ಪ್ರಯಾಣಿಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | DK Shivakumar: ಮೊದಲ ಬಾರಿಗೆ ಬೆಂಗಳೂರಿನಲ್ಲಿ ಮಾ. 21ರಂದು ಕಾವೇರಿ ಆರತಿ, ಸಾರ್ವಜನಿಕರಿಗೆ ಮುಕ್ತ ಪ್ರವೇಶ: ಡಿಕೆಶಿ