Yashodha Vantagodi: ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ ಆಯ್ಕೆ
DG-IGP Commendation Disc: ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆ, ಕರ್ತವ್ಯನಿಷ್ಠೆ, ದಕ್ಷ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ತೋರಿದ ಕಾರ್ಯಕ್ಷಮತೆಯನ್ನು ಪರಿಗಣಿಸಿ ಒಟ್ಟು 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಅತ್ಯುನ್ನತ 'ಡಿಜಿ-ಐಜಿಪಿ ಪ್ರಶಂಸನಾ ಪದಕ' ಘೋಷಿಸಲಾಗಿದೆ.
ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ. -
ಬೆಂಗಳೂರು: ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ ( Yashodha Vantagodi) ಹಾಗೂ ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಆನಂದ ದೊಡ್ಡಕುರುಬರ ಆಯ್ಕೆಯಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆ, ಕರ್ತವ್ಯನಿಷ್ಠೆ, ದಕ್ಷ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ತೋರಿದ ಕಾರ್ಯಕ್ಷಮತೆಯನ್ನು ಪರಿಗಣಿಸಿ ಒಟ್ಟು 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಅತ್ಯುನ್ನತ 'ಡಿಜಿ-ಐಜಿಪಿ ಪ್ರಶಂಸನಾ ಪದಕ' ಘೋಷಿಸಲಾಗಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ. ಸಲೀಂ ಅವರು ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಆಯ್ಕೆಯಾದವರ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಉನ್ನತ ಮಟ್ಟದ 17 ಐಪಿಎಸ್ ಅಧಿಕಾರಿಗಳಿಂದ ಹಿಡಿದು ತಳಮಟ್ಟದಲ್ಲಿ ಹಗಲಿರುಳು ಶ್ರಮಿಸುವ ಕಾನ್‌ಸ್ಟೇಬಲ್‌ಗಳವರೆಗೆ ಹಲವರು ಸ್ಥಾನ ಪಡೆದಿದ್ದಾರೆ.
ಕರ್ತವ್ಯನಿಷ್ಠೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ಅಪ್ರತಿಮ ಸಾಧನೆ ತೋರಿದ ಇಲಾಖೆಯ ಸಿಬ್ಬಂದಿಯ ಶ್ರಮವನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತಿದ್ದು, ಶೀಘ್ರದಲ್ಲೇ ನಡೆಯಲಿರುವ ಸಮಾರಂಭದಲ್ಲಿ ಈ ಪದಕಗಳನ್ನು ಪ್ರದಾನ ಮಾಡಲಾಗುವುದು ಎಂದು ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ತಿಳಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ ಕೆಎಸ್ಐಐಡಿಸಿಯಿಂದ 143 ಕೋಟಿ ಲಾಭಾಂಶ ಹಸ್ತಾಂತರ: ಎಂ.ಬಿ. ಪಾಟೀಲ್
ಹಾವೇರಿ ಎಸ್ ಪಿ ಯಶೋಧಾ ವಂಟಗೋಡಿ ಅವರು ಉತ್ತಮ ಆಡಳಿತಕ್ಕಾಗಿ ಹಾಗೂ ಜಿಲ್ಲೆಯ ವಿವಿಧ ಅಪರಾಧ ಪ್ರಕರಣಗಳ ಪತ್ತೆ ಮಾಡುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.