ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Haveri University hostel: ಹಾವೇರಿ ವಿವಿ ಹಾಸ್ಟೆಲ್‌ನಲ್ಲಿ ಅಪರಿಚಿತನ ಅನುಚಿತ ವರ್ತನೆ!: ಧರಣಿ, ಸ್ಥಳಕ್ಕೆ ಬಿಸಿಎಂ ತಾಲೂಕು ಅಧಿಕಾರಿ, ಪೊಲೀಸರ ಭೇಟಿ

ಕೆರಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯ(Haveri University)ದ ಕ್ಯಾಂಪಸ್‌ ನಲ್ಲಿರುವ ಬಿಸಿಎಂ ಹಾಸ್ಟೆಲ್‌ನಲ್ಲಿ ಅಪರಿಚಿತ ವ್ಯಕ್ತಿಯಿಂದ ಅನುಚಿತ ವರ್ತನೆ ಆರೋಪ ಕೇಳಿ ಬಂದಿದೆ. ಘಟನೆ ಖಂಡಿಸಿ ಎಸ್ಎಫ್ಐ ನೇತೃತ್ವದಲ್ಲಿ ಹಾಸ್ಟೆಲ್ ಎದುರು ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ್ದು, ವಿದ್ಯಾರ್ಥಿನಿಯರ ಹಾಸ್ಟೆಲ್‌ನ ಭದ್ರತೆ ಬಗ್ಗೆ ವಿದ್ಯಾರ್ಥಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ ಒದಗಿಸುವಂತೆ ವಿವಿ ಆಡಳಿತಕ್ಕೆ ಆಗ್ರಹಿಸಿದ್ದಾರೆ.

ಹಾವೇರಿ ವಿವಿ ಹಾಸ್ಟೆಲ್‌ನಲ್ಲಿ ಅಪರಿಚಿತನ ಅನುಚಿತ ವರ್ತನೆ!

-

Profile
Ashok Nayak Nov 15, 2026 1:03 PM

ಹಾವೇರಿ: ಕೆರಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯ(Haveri University)ದ ಕ್ಯಾಂಪಸ್‌ ನಲ್ಲಿರುವ ಬಿಸಿಎಂ ಹಾಸ್ಟೆಲ್‌ನಲ್ಲಿ ಅಪರಿಚಿತ ವ್ಯಕ್ತಿಯಿಂದ ಅನುಚಿತ ವರ್ತನೆ ಆರೋಪ ಕೇಳಿ ಬಂದಿದೆ.

student protest at Haveri 2

ಘಟನೆ ಖಂಡಿಸಿ ಎಸ್ಎಫ್ಐ ನೇತೃತ್ವದಲ್ಲಿ ಹಾಸ್ಟೆಲ್ ಎದುರು ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ್ದು, ವಿದ್ಯಾರ್ಥಿನಿಯರ ಹಾಸ್ಟೆಲ್‌ನ ಭದ್ರತೆ ಬಗ್ಗೆ ವಿದ್ಯಾರ್ಥಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ ಒದಗಿಸುವಂತೆ ವಿವಿ ಆಡಳಿತಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: BJP Protest: ಕಾಂಗ್ರೆಸ್ ಸರ್ಕಾರ ಯಾವುದಕ್ಕೆ ಬೆಲೆ ಏರಿಸಿಲ್ಲವೆಂದು ಹುಡುಕೋದೆ ಕಷ್ಟ: ಛಲವಾದಿ ನಾರಾಯಣಸ್ವಾಮಿ ಲೇವಡಿ

ಬಿಸಿಎಂ ತಾಲೂಕು ಅಧಿಕಾರಿ ಹಾಗೂ ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಪ್ರತಿಭಟನಾ ಸ್ಥಳದತ್ತ ಧಾವಿಸಿದ್ದು, ಬಿಸಿಎಂ ಅಧಿಕಾರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ವಿದ್ಯಾರ್ಥಿನಿಯರ ಸುರಕ್ಷತೆಯಲ್ಲಿ ನಿರ್ಲಕ್ಷ್ಯ ಸಲ್ಲದು, ಹಾಸ್ಟೆಲ್‌ನಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸುವಂತೆ ಹಾಗೂ ವಿದ್ಯಾರ್ಥಿಗಳ ಪರವಾಗಿ ಭದ್ರತೆ ಹಾಗೂ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.