ಹಾವೇರಿ: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರೇಕೆರೂರ ತಾಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಸೋಮವಾರ ಜರುಗಿದೆ (Karnataka Rains). ಡಮ್ಮಳ್ಳಿ ಗ್ರಾಮದ ನಾಗಪ್ಪ ಕಣಸೋಗಿ ಮೃತಪಟ್ಟವರು (Haveri News). ಎತ್ತು ಮೇಯಿಸಲೆಂದು ಹೊಲದ ಕಡೆಗೆ ಹೋಗಿ ಮರಳಿ ಮನೆಗೆ ಬರುವಾಗ ಸಿಡಿಲು ಬಡಿದು ರೈತ ನಾಗಪ್ಪ ಕಣಸೋಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಹಿರೇಕೆರೂರು ಶಾಸಕ ಯು.ಬಿ. ಬಣಕಾರ, ತಹಸೀಲ್ದಾರ್ ಪ್ರಭಾಕರ್ ಮತ್ತು ಹಿರೇಕೆರೂರು ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಈ ಕುರಿತು ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Double Murder Case: ಆಸ್ತಿಗಾಗಿ ಅವಳಿ ಕೊಲೆ, ತಾಯಿ- ಮಗನ ಹತ್ಯೆ
ಬೆಳಗಾವಿಯಲ್ಲಿ ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ನಡೆದಿತ್ತು. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಅವಘಡ ಸಂಭವಿಸಿತ್ತು. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ.
ಚಿಕ್ಕಮಗಳೂರಲ್ಲಿ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸಾವು
ಚಿಕ್ಕಮಗಳೂರು: ಕೆಲವು ದಿನಗಳ ಹಿಂದೆ ಚಿಕ್ಕಮಗಳೂರಿನಲ್ಲೂ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದರು. ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಈ ಘಟನೆ ನಡೆದಿತ್ತು. ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ (65) ಮೃತರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಮೃತಪಟ್ಟಿದ್ದರು.