ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹಾವೇರಿ ಬಳಿ ರಸ್ತೆ ಮಧ್ಯೆ ಹೊತ್ತಿ ಉರಿದ KSRTC ಪಲ್ಲಕ್ಕಿ ಬಸ್; 17 ಮಂದಿ ಪ್ರಾಣಾಪಾಯದಿಂದ ಪಾರು!

ಬೆಂಗಳೂರಿ-ನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬಸ್ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರತೆ ಹೆಚ್ಚಾಗಿ ಇಡೀ ಬಸ್‌ನ್ನು ಆವರಿಸಿಕೊಂಡಿದೆ.

ತಪ್ಪಿದ ಭಾರೀ ದುರಂತ; ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದ KSRTC ಬಸ್

-

Abhilash BC
Abhilash BC May 5, 2026 10:55 AM

ಹಾವೇರಿ, ಮೇ 5: ಬೆಂಗಳೂರಿನಿಂದ ಗದಗದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ ಬೆಂಕಿಗಾಹುತಿಯಾಗಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿ ಒಟ್ಟು 17 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಪಕ್ಕೀರಪ್ಪ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿ ರಕ್ಷಣೆ ಮಾಡಿದ್ದಾರೆ.

ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬಸ್ ಚಾಲಕ ಪಕ್ಕೀರಪ್ಪ ಬೆಂಕಿ ನಂದಿಸಲು ಹರಸಹಾಸ ಪಟ್ಟಿದ್ದಾರೆ‌. ಬಸ್ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರತೆ ಹೆಚ್ಚಾಗಿ ಇಡೀ ಬಸ್‌ನ್ನು ಆವರಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಕೆಸ್‌ ಆರ್‌ಟಿಸಿ ಪಲ್ಲಕ್ಕಿ ಬಸ್‌ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಪ್ರಯಾಣಿಕರನ್ನು ಬೇರೆ ಬಸ್‌ನಲ್ಲಿ ಕಳುಹಿಸಲಾಗಿದೆ.

Haveri Bus Fire

ಈ ಘಟನೆ ರಾಣೆಬೇನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೀಗಾಗಿ ಸ್ಥಳೀಯ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು, ತಾಂತ್ರಿಕ ದೋಷವೋ, ಎಂಜಿನ್ ಭಾಗದಲ್ಲಿ ಸಮಸ್ಯೆಯೋ ಅಥವಾ ಬೇರೆ ಯಾವುದೇ ಕಾರಣವೋ ಎಂಬುದರ ಬಗ್ಗೆ ಪೊಲೀಸರು ಹಾಗೂ ಸಂಬಂಧಪಟ್ಟ ಇಲಾಖೆ ಮುಂದಿನ ತನಿಖೆ ನಡೆಸುವ ನಿರೀಕ್ಷೆ ಇದೆ.

ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ

ಪತ್ಯೇಕ ಘಟನೆಯೊಂದರಲ್ಲಿ ಬಾತುಕೋಳಿ ಹಿಡಿಯುವುದಕ್ಕೆ ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಧಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಅರಳುಗುಪ್ಪೆ ಗ್ರಾಮದ ಅಬ್ದುಲ್ ರೆಹಮಾನ್ (13), ನಾಯಜ್ (12), ಶಿವಮೊಗ್ಗದ ಮೈದಿಹಾ (9), ಅರಮಾನ್ (8) ಮೃತಪಟ್ಟ ಮಕ್ಕಳು. ಅರಳುಗುಪ್ಪೆಯ 4 ವರ್ಷದ ಅರ್ಮನ್ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗಾಗಿ ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಜೆಯಲ್ಲಿ ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಶ್ರೀನಿವಾಸ ಸಾಗರದಲ್ಲಿ ಮುಳುಗಿ 12 ವರ್ಷದ ಪ್ರವಾಸಿ ಸಬಿಹಾ ಸಾವು

ಕೆರೆ ಪಾತ್ರದಲ್ಲಿ ಈ ಮಕ್ಕಳು ಆಟವಾಡುವಾಗ ಈ ದುರ್ಘಟನೆ ನಡೆದಿದೆ. ಆಟವಾಡುತ್ತಿರುವಾಗ ತಮ್ಮೊಂದಿಗಿದ್ದ ಬಾತುಕೋಳಿ ನೀರಿಗಿಳಿದಿದೆ ಎಂದು ಅದನ್ನು ಹಿಡಿಯಲು ಹೋದ ಬಾಲಕಿ ನೀರಿಗೆ ಬಿದ್ದಿದ್ದಾಳೆ. ಈ ಬಾಲಕಿಯನ್ನು ರಕ್ಷಿಸಲು ಹೋದ ಒಬ್ಬರ ಹಿಂದೊಬ್ಬರಂತೆ ಮಕ್ಕಳು ನೀರಿಗಿಳಿದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.