ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಹಾವೇರಿಯಲ್ಲಿ ಪ್ರೀತಿಸಿ ಮದುವೆಯಾದ ಜೋಡಿಗೆ ಹೆತ್ತವರೇ ವಿಲನ್; ರಕ್ಷಣೆ ಕೋರಿ ಪೊಲೀಸ್‌ ಠಾಣೆಗೆ ದೂರು

ಹಾವೇರಿ ತಾಲೂಕಿನ ದೇವಗಿರಿ ಯಲ್ಲಾಪುರ ಗ್ರಾಮದ ಚೈತ್ರಾ ಮತ್ತು ವಿಕ್ರಮ ಎಂಬ ಜೋಡಿ ಪ್ರೀತಿಸಿ ಮದುವೆಯಾಗಿದ್ದಾರೆ. ಆದರೆ, ಇದೀಗ ನವಜೋಡಿಗೆ ಪೋಷಕರಿಂದಲೇ ಬೆದರಿಕೆ ಬರುತ್ತಿದ್ದು, ತಮ್ಮನ್ನು ಬದುಕಲು ಬಿಡುತ್ತಿಲ್ಲವೆಂದು ಹಾವೇರಿಯ ಮಹಿಳಾ ಠಾಣೆಗೆ ದೂರು ನೀಡಲಾಗಿದೆ.

ಹಾವೇರಿ: ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವಕ-ಯುವತಿ (Love-married couple), ಹೆತ್ತವರ ವಿರೋಧದ ನಡುವೆ ಮದುವೆಯಾದ ಘಟನೆ ತಾಲೂಕಿನಲ್ಲಿ (Haveri) ನಡೆದಿದೆ. ಆದರೆ, ಅವರಿಗೆ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ರಕ್ಷಣೆ ಕೋರಿ ಪೋಲಿಸ್ ಠಾಣೆ ಮೆಟ್ಟಿಲೇರಿದ್ದಾರೆ.

ಹಾವೇರಿ ತಾಲೂಕಿನ ದೇವಗಿರಿ ಯಲ್ಲಾಪುರ ಗ್ರಾಮದ ಚೈತ್ರಾ ಮತ್ತು ವಿಕ್ರಮ ಎಂಬ ಜೋಡಿ ಪ್ರೀತಿಸಿ ಮದುವೆಯಾಗಿದ್ದಾರೆ. ಆದರೆ, ಇದೀಗ ನವಜೋಡಿಗೆ ಹೆತ್ತವರೇ ವಿಲನ್ ಆಗಿದ್ದಾರೆ. ತಮ್ಮನ್ನು ಬದುಕಲು ಬಿಡುತ್ತಿಲ್ಲವೆಂದು ಆರೋಪಿಸಿ ಹಾವೇರಿಯ ಮಹಿಳಾ ಠಾಣೆಗೆ ನವದಂಪತಿ ದೂರು ನೀಡಿದ್ದಾರೆ.

ಹೆತ್ತವರ ಮದುವೆಗೆ ಒಪ್ಪದ ಕಾರಣ ಮನೆಯಿಂದ ಓಡಿಹೋಗಿದ್ದ ಪ್ರೇಮಿಗಳು, ಹಿರೆಕೇರೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿದ್ದರು. ಸುದ್ದಿ ತಿಳಿದು ಹುಡುಗಿಯ ಮನೆಯ ಕಡೆಯವರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಹೀಗಾಗಿ ನಮಗೆ ರಕ್ಷಣೆ ಬೇಕು, ನಮ್ಮ ಪಾಡಿಗೆ ನಮ್ಮನ್ನು ಬದುಕಲು ಬಿಡಿ, ನಮ್ಮ ತಂಟೆಗೆ ಬರಬೇಡಿ ಎಂದು ಯುವಜೋಡಿ ಠಾಣೆಗೆ ದೂರು ನೀಡಿದ್ದಾರೆ.

ರಾಮತೀರ್ಥ ಹೊಸಕೊಪ್ಪ ಮೀಸಲು ಅರಣ್ಯದಲ್ಲಿ ಚಿರತೆ ಸಾವು; ಗ್ರಾಮಸ್ಥರಲ್ಲಿ ಆತಂಕ

Hanagal News

ಹಾನಗಲ್, ಆ.29: ಹಾನಗಲ್ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮಕ್ಕೆ ಹೊಂದಿಕೊಂಡಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆ ಮೃತಪಟ್ಟಿರುವುದು ಕಂಡುಬಂದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಚಿರತೆ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹಾನಗಲ್ (Hanagal News) ವಲಯ ಅರಣ್ಯಾಧಿಕಾರಿಗಳು ಹಾಗೂ ಜಿಲ್ಲಾ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪಶುವೈದ್ಯರು ಸ್ಥಳಕ್ಕೆ ಆಗಮಿಸಿ ಚಿರತೆಯ ಮೃತದೇಹದ ಪರೀಕ್ಷೆ ನಡೆಸಿದರು.

ಅರಣ್ಯ ಪ್ರದೇಶದಲ್ಲಿ ಚಿರತೆ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ರೈತರು ಹಾಗೂ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದರು. ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಸಂಚಾರ ಹೆಚ್ಚಿರುವುದರಿಂದ ರೈತರು ಹಾಗೂ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ರಸ್ತೆ ನಿರ್ಮಾಣಕ್ಕೆ ಆಗ್ರಹ: ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಸಮರ್ಪಕ ರಸ್ತೆ ಸಂಪರ್ಕ ಕಲ್ಪಿಸಬೇಕು. ಅರಣ್ಯ ಪ್ರದೇಶದಲ್ಲಿರುವ ಕಾಡುಪ್ರಾಣಿಗಳ ಸಂಚಾರದ ಬಗ್ಗೆ ಅರಣ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Accident: ಸಿಮೆಂಟ್ ಲಾರಿ–ಟ್ರ್ಯಾಕ್ಟರ್ ಡಿಕ್ಕಿ: ಕೂಲಿ ಕಾರ್ಮಿಕ ಸಾವು

ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಅವುಗಳು ರೈತರ ಜಮೀನುಗಳತ್ತ ಬರುತ್ತಿವೆ. ಇದರಿಂದ ರೈತರು ಬೆಳೆ ಹಾಗೂ ಜಾನುವಾರುಗಳ ರಕ್ಷಣೆಗೆ ಆತಂಕಪಡುವಂತಾಗಿದೆ. ಕಾಡುಪ್ರಾಣಿಗಳು ಗ್ರಾಮಗಳತ್ತ ಬಾರದಂತೆ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಚಿರತೆ ಸಾವಿಗೆ ನಿಖರ ಕಾರಣವೇನು ಎಂಬುದು ಪಶುವೈದ್ಯಕೀಯ ಪರೀಕ್ಷೆಯ ವರದಿ ಬಳಿಕ ತಿಳಿದುಬರಬೇಕಿದೆ.