ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಕುಟುಂಬ ಕಲಹ; ವರದಾ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ

Haveri News: ಹಾವೇರಿ ತಾಲೂಕಿನ ವರದಾಹಳ್ಳಿಯಲ್ಲಿ ಭಾನುವಾರ ಘಟನೆ ನಡೆದಿದೆ. ಗಂಡನ ಮನೆಯಲ್ಲಿ ದಿನನಿತ್ಯ ಆಗುತ್ತಿದ್ದ ಭಿನ್ನಾಭಿಪ್ರಾಯ, ಕಲಹದಿಂದ ನೊಂದ ಮಹಿಳೆಯೊಬ್ಬರು, ಮಗಳ ಜತೆ ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ: ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ (Self Harming) ಹಾವೇರಿ ತಾಲೂಕಿನ ವರದಾಹಳ್ಳಿಯಲ್ಲಿ ಭಾನುವಾರ ನಡೆದಿದೆ. ಗಂಡನ ಮನೆಯಲ್ಲಿ ದಿನನಿತ್ಯ ಆಗುತ್ತಿದ್ದ ಭಿನ್ನಾಭಿಪ್ರಾಯ, ಕಲಹದಿಂದ ನೊಂದ 38 ವರ್ಷದ ಸವಿತಾ ನಾಗರಾಜ ಉಳ್ಳಾಗಡ್ಡಿ, ಮಗಳು ಕಾವ್ಯಾ ಇಬ್ಬರೂ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇಲಾಖೆ‌ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೋಣಿ ಮೂಲಕ ನದಿಯಲ್ಲಿ ಹುಡುಕಾಟ ಪ್ರಾರಂಭಿಸಿದ್ದರು. ಇದೀಗ ಕಾವ್ಯಾ ಅವರ ಮೃತದೇಹ ಪತ್ತೆಯಾಗಿದ್ದು, ಸವಿತಾ ಅವರ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸವಿತಾ ಅವರಿಗೆ ಇಬ್ಬರು ಗಂಡು, ಒಬ್ಬ ಹೆಣ್ಣು ಮಗಳಿದ್ದಾಳೆ. ಇತ್ತೀಚೆಗಷ್ಟೇ ಮಗಳು ಕಾವ್ಯಾ ನವೋದಯ ಪರೀಕ್ಷೆ ಪಾಸಾಗಿದ್ದಳು. ಪ್ರತಿಭಾವಂತೆಯಾಗಿದ್ದಳು. ಆದರೆ, ಮನೆಯಲ್ಲಿ ನಿತ್ಯ ಕಲಹ, ಭಿನ್ನಾಭಿಪ್ರಾಯವಿದ್ದ ಹಿನ್ನೆಲೆಯಲ್ಲಿ ಮನನೊಂದು ತಾಯಿ ಸವಿತಾ ಅವರು ಕಾವ್ಯಾಳನ್ನು ಕರೆದುಕೊಂಡು ಬಂದು ನದಿಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Ex-minister's Controversy: ಆತ್ಮಹತ್ಯೆ ಮಾಡಿಕೊಳ್ಳುವ ಬದಲು ಶಾಸಕರನ್ನೇ ಕೊಂದು ಬಿಡಿ- ನಾಲಿಗೆ ಹರಿಬಿಟ್ಟ ಮಾಜಿ ಸಚಿವ

ಸಂಬಳ ಸಿಗದೆ ಓಲಾ ಕಂಪನಿ ಸಿಬ್ಬಂದಿ ಆತ್ಮಹತ್ಯೆ, ಸಿಇಒ ಮೇಲೆ ದೂರು

bhavesh agarwal

ಬೆಂಗಳೂರು: ವೇತನ ನೀಡದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru) ಓಲಾ ಕಂಪನಿಯ ಸಿಬ್ಬಂದಿಯೊಬ್ಬರು (Ola employee) ಆತ್ಮಹತ್ಯೆಗೆ (Self Harming) ಶರಣಾಗಿದ್ದು, ಕಂಪನಿಯ ಸಿಇಓ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ. ಕಂಪನಿಯ ಇಂಜಿನಿಯರ್ ಆಗಿದ್ದ ಕೆ. ಅರವಿಂದ್ ಎಂಬ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭತ್ಯೆ ಹಾಗೂ ವೇತನ ನೀಡದೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಡೆತ್‌ ನೋಟ್‌ ಬರೆದಿಟ್ಟ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಓಲಾ ಕಂಪನಿಯ ಹೋಮೋಲೋಗೇಶನ್ ಇಂಜಿನಿಯರಿಂಗ್ ವಿಭಾಗದಲ್ಲಿ ಕೆ. ಅರವಿಂದ್ ಕಾರ್ಯನಿರ್ವಹಿಸುತ್ತಿದ್ದರು. ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆ. ಅರವಿಂದ್ ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳ ನಂತರ ಅಕೌಂಟಿಗೆ ಹಣ ಬಂದಿದೆ. 30ನೇ ತಾರೀಕು 17 ಲಕ್ಷ 46 ಸಾವಿರ ಹಣ ಅಕೌಂಟಿಗೆ ಬಂದಿತ್ತು. ಕಂಪನಿಯಿಂದ ಅರವಿಂದ್ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು.

ಅನುಮಾನದಿಂದ ಕುಟುಂಬದವರು ಕಂಪನಿಯವರನ್ನು ಪ್ರಶ್ನೆ ಮಾಡಿದ್ದಾರೆ. ಕಂಪನಿಯ ಹೆಚ್.ಆರ್. ಮತ್ತು ಸಿಬ್ಬಂದಿಯಿಂದ ಅಸ್ಪಷ್ಟ ಮಾಹಿತಿ ಸಿಕ್ಕಿದೆ. ಬಳಿಕ ಅರವಿಂದ್ ರೂಮಿನಲ್ಲಿ 28 ಪುಟಗಳ ಡೆತ್ ನೋಟ್ ಪತ್ತೆಯಾಗಿದ್ದು, ಆಗ ಕಂಪನಿಯ ವಂಚನೆ ಬಯಲಾಗಿದೆ. ಇದೀಗ ಓಲಾ ಸಂಸ್ಥೆಯ ಸಿಇಒ ಭವೇಶ್ ಅಗರ್ವಾಲ್ ಮತ್ತು ಹಿರಿಯ ಸಿಬ್ಬಂದಿ ಸುಬ್ರತ್ ಕುಮಾರ್ ದಾಸ್ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.