Haveri accident: ಹಾವೇರಿಯಲ್ಲಿ ಸಾರಿಗೆ ಬಸ್-ಲಾರಿ ಡಿಕ್ಕಿಯಾಗಿ ಓರ್ವ ಸಾವು, ಆರು ಮಂದಿಗೆ ಗಾಯ
ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಕಡೆಗೆ ಸಾರಿಗೆ ಬಸ್ ಹೋಗುತ್ತಿದ್ದ ವೇಳೆ ಎದುರಿನಿಂದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಓರ್ವ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕೇಸ್ ದಾಖಲಿಸಿಕೊಂಡಿದ್ದಾರೆ.
-
ಹಾವೇರಿ: ತಾಲೂಕಿನ ಹೊಸರಿತ್ತಿ ಗ್ರಾಮದ ಕಡೆಗೆ ತೆರಳುತ್ತಿದ್ದ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ (Haveri accident) ಬುಧವಾರ ಮಧ್ಯಾಹ್ನ ನಡೆದಿದೆ.
ಸಾರಿಗೆ ಬಸ್ ಹೊಸರಿತ್ತಿ ಗ್ರಾಮದ ಕಡೆಗೆ ಸಂಚರಿಸುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಏಕಾಏಕಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಓರ್ವ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಗಾಯಾಳುಗಳಲ್ಲಿ ಕೆಲವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ತೀವ್ರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.