ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Swathi murder Case: ಸ್ವಾತಿ‌ ಬ್ಯಾಡಗಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

Swathi murder Case: ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು. ಸ್ವಾತಿ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧವಾಗಿದ್ದೇವೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಸ್ವಾತಿ‌ ಬ್ಯಾಡಗಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

Profile Prabhakara R Mar 19, 2025 8:03 PM

ಹಾವೇರಿ: ಹತ್ಯೆಗೀಡಾದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ (Swathi murder Case) ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಶಾಸಕ ಯು.ಬಿ. ಬಣಕಾರ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸ್ವಾತಿ ಹತ್ಯೆ ಪ್ರಕರಣದ ಬಗ್ಗೆ ವಿವರಿಸಿ ಪರಿಹಾರ ಬಿಡುಗಡೆ ಮಾಡಲು ಮನವಿ ಮಾಡಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಯಾವುದೇ ಕಾರಣಕ್ಕೂ ಅಪರಾಧಿಗಳು ಶಿಕ್ಷೆಯಿಂದ ಪಾರಾಗುವ ಅವಕಾಶ ನೀಡುವುದಿಲ್ಲ. ಹತ್ಯೆಗೀಡಾದ ಸ್ವಾತಿ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧವಾಗಿದ್ದು, ಹತ್ಯೆ ಮಾಡಿದವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು. ಪ್ರಕರಣವನ್ನು ದುರ್ಬಲಗೊಳಿಸದಂತೆ ಎಚ್ಚರಿಕೆ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.

ರಾಣೇಬೆನ್ನೂರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸ್ವಾತಿ ಬ್ಯಾಡಗಿ ಅವರು ಮಾರ್ಚ್ 2ರಂದು ಕೆಲಸಕ್ಕೆ ಹೋದವರು ಮರಳಿ ಮನೆಗೆ ಬಂದಿರಲಿಲ್ಲ. ಹೀಗಾಗಿ ಕುಟುಂಬದವರು ನಾಪತ್ತೆ ದೂರು ದಾಖಲು ಮಾಡಿದ್ದರು. ಮಾರ್ಚ್ 6ರಂದು ರಾಣೆಬೆನ್ನೂರು ತಾಲೂಕಿನ ಪತ್ಯಾಪುರ ಬಳಿ ತುಂಗಭದ್ರಾ ನದಿ ದಡದಲ್ಲಿ ಶವ ಪತ್ತೆಯಾಗಿತ್ತು. ಪೊಲೀಸರು ತನಿಖೆ ಕೈಗೊಂಡಾಗ ಈ ಶವ ನಾಪತ್ತೆಯಾಗಿದ್ದ ಸ್ವಾತಿ ಅವರದ್ದು. ಅವರನ್ನು ಹತ್ಯೆ ಮಾಡಿ ನದಿಗೆ ಎಸೆಯಲಾಗಿದೆ ಎನ್ನುವುದು ದೃಢಪಟ್ಟ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

image

ಹತ್ಯೆ ಪ್ರಕರಣದ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವ ಮೂಲಕ ಸ್ವಾತಿ ಬ್ಯಾಡಗಿ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲಾಗುವುದು. ಪ್ರಕರಣ ದುರ್ಬಲವಾಗಲು ಅವಕಾಶ ನೀಡಬಾರದು ಎಂದು ಎಸ್ಪಿಗೆ ನಿರ್ದೇಶನ ನೀಡಲಾಗಿದೆ.

ಶಿವಾನಂದ ಎಸ್. ಪಾಟೀಲ್‌, ಜಿಲ್ಲಾ ಉಸ್ತುವಾರಿ ಸಚಿವ

ಮಗಳನ್ನೇ ಹುರಿದು ಮುಕ್ಕಿದ ಕಾಮಪಿಶಾಚಿ ತಂದೆ ಬಂಧನ

ದೇವನಹಳ್ಳಿ: ತಂದೆಯೇ ಮಗಳ ಮೇಲೆ ಕಾಮಪಿಶಾಚಿಯಂತೆ ಅತ್ಯಾಚಾರ (physicial Abuse) ಎಸಗಿದ ಘಟನೆ ಹೊಸಕೋಟೆ (Hosakote) ನಗರದಲ್ಲಿ ವರದಿಯಾಗಿದೆ. ತಂದೆಯಿಂದ ಅತ್ಯಾಚಾರಕ್ಕೊಳಗಾದ ಮತ್ತು ಬೆದರಿಕೆ ಹಾಕಲ್ಪಟ್ಟ (threat) ಯುವತಿಯೊಬ್ಬಳು ಮನೆ ಬಿಟ್ಟು ಪಿಜಿಯಲ್ಲಿ ಆಶ್ರಯ ಪಡೆದ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ತಂದೆಯೇ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಹೊಸಕೋಟೆ ಮಹಿಳಾ ಠಾಣೆ ಪೊಲೀಸರು (Hosakote Women Police) ಆರೋಪಿ ಮಂಜುನಾಥ್​ನನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.

19 ವರ್ಷ ವಯಸ್ಸಿನ ಮಗಳ‌ ಮೇಲೆ ತಂದೆ ಮಂಜುನಾಥ ಅತ್ಯಾಚಾರ ಮಾಡಿದ್ದರ ಜತೆಗೆ ಈ ವಿಷಯವನ್ನು ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಆಕೆಗೆ ಬೆದರಿಕೆಯನ್ನೂ ಹಾಕಿದ್ದಾನೆ. ಕಾರು ಚಾಲಕನಾಗಿರುವ ಮಂಜುನಾಥ್​​​ಗೆ ಮೂರು ಜನ ಮಕ್ಕಳು. ಇಬ್ಬರು ಹೆಣ್ಣು, ಒಂದು ಗಂಡು ಮಗು. ಹಿರಿಯ ಮಗಳ ಮೇಲೆ‌ ಅತ್ಯಾಚಾರ ಮಾಡಿರುವ ಆರೋಪ ಹಾಗೂ ದೂರು ದಾಖಲಾಗಿದೆ. ತಂದೆಯ ಕಾಟ ತಾಳಲಾರದೆ ಯುವತಿ ಪಿಜಿಯಲ್ಲಿ ವಾಸ ಮಾಡುತ್ತಿದ್ದಳು ಎನ್ನಲಾಗಿದೆ. ವಿಷಯ ತಿಳಿಸಿದರೆ ಕೊಲೆ ಮಾಡುವ ಬೆದರಿಕೆಯನ್ನೂ ಈತ ಹಾಕಿದ್ದ. ಹೀಗಾಗಿ ಜೀವ ಭಯದಿಂದ ಯುವತಿ ಮನೆಯಿಂದ ದೂರ ಉಳಿದಿದ್ದಳು.

ಈ ಸುದ್ದಿಯನ್ನೂ ಓದಿ | Children Death: ಆಟವಾಡುವಾಗ ಸಂಪ್‌ಗೆ ಬಿದ್ದು ಇಬ್ಬರು ಮಕ್ಕಳ ದುರ್ಮರಣ

ತಂದೆಯಿಂದಾದ ಅತ್ಯಾಚಾರಕ್ಕೆ ನ್ಯಾಯ ಒದಗಿಸುವಂತೆ ಯುವತಿ ಆಗ್ರಹಿಸಿದ್ದು, ಸದ್ಯ ಪೊಲೀಸರಿಂದ ತನಿಖೆ ನಡೆಯುತ್ತಿದೆ. ಮಂಜುನಾಥನನ್ನು ಬಂಧಿಸಲಾಗಿದ್ದು, ಬಾಯಿ ಬಿಡಿಸಲಾಗುತ್ತಿದೆ. ಈತ ಇನ್ನಿತರರ ಮೇಲೂ ಇಂಥ ಕೃತ್ಯ ಎಸಗಿದ್ದಾನೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ.