Basavaraj Bommai: ರಾಜ್ಯ ಸರ್ಕಾರ 3,000 ರೂ. ಕೊಟ್ಟು ಮೆಕ್ಕೆಜೋಳ ಖರೀದಿಸಲಿ: ಬಸವರಾಜ ಬೊಮ್ಮಾಯಿ
State Congress Government: ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಶುಕ್ರವಾರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೆಕ್ಕೆಜೋಳ ಖರೀದಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮ್ಯಾನ್ ಕೆಲಸ ಮಾಡುತ್ತಿದೆ. ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ಪ್ರತಿ ಕ್ವಿಂಟಾಲ್‌ಗೆ 3,000 ರೂ. ಕೊಟ್ಟು ಮೆಕ್ಕೆಜೋಳ ಖರೀದಿಸಲಿ ಎಂದು ಆಗ್ರಹಿಸಿದ್ದಾರೆ.
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ) -
ಹಾವೇರಿ, ನ. 21: ಮೆಕ್ಕೆಜೋಳ ಖರೀದಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ (State Congress Government) ಪೋಸ್ಟ್‌ಮ್ಯಾನ್ ಕೆಲಸ ಮಾಡುತ್ತಿದ್ದು, ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ರೈತರ ಬೇಡಿಕೆಯಂತೆ ಪ್ರತಿ ಕ್ವಿಂಟಾಲ್‌ಗೆ 3,000 ರೂ. ಕೊಟ್ಟು ಮೆಕ್ಕೆಜೋಳ ಖರೀದಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ದೇಶಕ್ಕೆ ಎಷ್ಟು ಮೆಕ್ಕೆಜೋಳ ಬೇಕೊ ಅದರ ಆಧಾರದ ಮೇಲೆ ರಫ್ತಾಗುತ್ತದೆ. ಈ ವರ್ಷ ಕರ್ನಾಟಕದಲ್ಲಿ 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಟನ್ ಬೆಳೆದಿದ್ದಾರೆ. ಈ ವರ್ಷ ಕನಿಷ್ಠ 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಅದಕ್ಕಂತೂ ರಾಜ್ಯ ಸರ್ಕಾರ ಪರಿಹಾರ ಕೊಡುವುದಿಲ್ಲ. ಮುಖ್ಯಮಂತ್ರಿ ರೈತರ ವಿಚಾರದಲ್ಲಿ ಕೇವಲ ಪೋಸ್ಟ್‌ಮ್ಯಾನ್ ಕೆಲಸ ಮಾಡುತ್ತಿದ್ದಾರೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಸರ್ಕಾರದಿಂದ ಖರೀದಿ ಮಾಡಿದ್ದರು. ಅವರು ಕೇಂದ್ರದ ಕಡೆಗೆ ಬೆರಳು ಮಾಡಿರಲಿಲ್ಲ. ಇದೇನು ಹಾಳಾಗುವ ಬೆಳೆ ಅಲ್ಲ. ಅದನ್ನು ಇಟ್ಟುಕೊಂಡು ಬೆಲೆ ಬಂದಾಗ ಮಾರಾಟ ಮಾಡಬಹುದು. ವ್ಯತ್ಯಾಸ ಬಂದರೆ ಕೇಂದ್ರ ಸರ್ಕಾರ ಕೊಡುತ್ತದೆ. ಆದ್ದರಿಂದ ರೈತರ ಬೇಡಿಕೆಯಂತೆ ಎಂಎಸ್‌ಪಿ 2,400 ರೂ. ಇದೆ. ರೈತರ ಬಗ್ಗೆ ಕಳಕಳಿ, ಪ್ರೀತಿ ಇದ್ದರೆ ಇನ್ನೂ 600 ಸೇರಿಸಿ ಪ್ರತಿ ಕ್ವಿಂಟಾಲ್‌ಗೆ 3,000 ರೂ. ಕೊಟ್ಟು ಖರೀದಿಸಲಿ ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಬಗ್ಗೆ ಮಾತ್ರ ಪ್ರಸ್ತಾಪ ಆಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಇದು ರಾಜ್ಯ ಸರ್ಕಾರ ಅಲ್ಲ, ಪೋಸ್ಟ್ ಆಫೀಸ್ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರ ಶಾಲೆಗಳನ್ನು ಮುಚ್ಚುತ್ತಿದೆ, ಮಠಗಳು ಉತ್ತಮವಾಗಿ ನಡೆಸುತ್ತಿವೆ- ಹೆಚ್.ಡಿ. ಕುಮಾರಸ್ವಾಮಿ ಅತೃಪ್ತಿ
ಕೂಡಲೇ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲು ಕ್ರಮ ವಹಿಸಿ- ಸಿಎಂಗೆ ಪತ್ರ ಬರೆದ ಬಸವರಾಜ ಬೊಮ್ಮಾಯಿ
ಬೆಂಗಳೂರು: ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ (Crop Relief) ಕೊಡಬೇಕು ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.
ರಾಗಿ, ಜೋಳ, ಮೆಕ್ಕೆಜೋಳದ ಕಮಿಷನ್ ಪ್ರತಿ ಕ್ವಿಂಟಲ್‌ಗೆ 27 ರೂ.ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಎರಡು ವರ್ಷ ವಿಪರೀತ ಮಳೆ ಬಿದ್ದು ರಾಜ್ಯದ ಬಹುತೇಕ ಬೆಳೆಗಳು ನಾಶವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ರೈತರಿಗೆ ಎರಡು ವರ್ಷವೂ ಕೂಡ ನಷ್ಟವಾಗಿದ್ದು ಮೆಕ್ಕೆಜೋಳ, ಸೊಯಾಬಿನ್, ಹೆಸರು, ಈರುಳ್ಳಿ ಬೆಳೆ ನಾಶವಾಗಿದೆ. ಕಳೆದ ವರ್ಷ ಮಳೆಯಿಂದ ನಷ್ಟವಾದ ಬೆಳೆಗೆ ಯಾವುದೇ ಪರಿಹಾರ ಸಿಕ್ಕಿರುವುದಿಲ್ಲ. ಮೊನ್ನೆ ತಾವು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿಯನ್ನು ಸಲ್ಲಿಸಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ. ಆದರೆ, ವಾಸ್ತವಾಂಶ ತಮ್ಮ ಗಮನಕ್ಕೆ ತರಲು ಬಯಸುತ್ತೇನೆ ಎಂದು ಹೇಳಿದ್ದಾರೆ.