ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Basavaraj Bommai: ಕರ್ನಾಟಕಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ: ಬೊಮ್ಮಾಯಿ

State Congress Government: ಮಾತೆತ್ತಿದರೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು. ಹಲವಾರು ಸಂವಿಧಾನ ವಿರುದ್ಧ ಕೃತ್ಯಗಳಿದ್ದಾವೆ. ಜನರ ವಾಕ್ ಸ್ವಾತಂತ್ರ್ಯ, ನಾಗರಿಕರ ಹಕ್ಕು ಮೊಟಕುಗೊಳಿಸುವ ಕ್ರಮ ಈ ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪಯತ್ನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನ: ಬೊಮ್ಮಾಯಿ

-

Profile Siddalinga Swamy Oct 29, 2025 7:43 PM

ಹಾವೇರಿ, ಅ.29: ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಆರ್‌ಎಸ್‌ಎಸ್‌ ವಿರುದ್ಧ ರಾಜ್ಯ ಸರ್ಕಾರ ಮಾಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆರ್‌ಎಸ್‌ಎಸ್ ವಿರುದ್ಧ ರಾಜ್ಯ ಸರ್ಕಾರ ಮಾಡಿದ್ದ ಆದೇಶ ಸಂವಿಧಾನ ಬಾಹಿರವಾಗಿದೆ ಎಂದು ನಾನು ಹೇಳಿದ್ದೆ. ಅದನ್ನೇ ರಾಜ್ಯ ಹೈಕೋರ್ಟ್ ಧಾರವಾಡ ಪೀಠ ಮಧ್ಯಂತರ ತಡೆ ನೀಡಿದೆ. ಬಹಳ ಸಷ್ಟವಾಗಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವ ಸರ್ಕಾರ ಇದ್ದರೆ, ಸಂವಿಧಾನದಲ್ಲಿ ನಂಬಿಕೆ ಇದ್ದರೆ ಈ ರೀತಿ ಮಾಡುವುದಿಲ್ಲ. ಮಾತೆತ್ತಿದರೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು. ಹಲವಾರು ಸಂವಿಧಾನ ವಿರುದ್ಧ ಕೃತ್ಯಗಳಿದ್ದಾವೆ. ಜನರ ವಾಕ್ ಸ್ವಾತಂತ್ರ್ಯ, ನಾಗರಿಕರ ಹಕ್ಕು ಮೊಟಕುಗೊಳಿಸುವ ಕ್ರಮ ಈ ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪಯತ್ನಿಸುತ್ತಿದೆ ಎಂದು ಆರೋಪಿಸಿದರು.

ಸಂವಿಧಾನಕ್ಕೆ ಅಪಚಾರ

ಚುನಾವಣಾ ಆಯೋಗದ ಕುರಿತು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ಆಯೋಗ ಸಂವಿಧಾನ ಬದ್ಧವಾದ ಸಂಸ್ಥೆ ಅವರಿಗೆ ಟೀಕೆ ಮಾಡುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡುತ್ತಿದ್ದಾರೆ. ಇದರ ಅರಿವು ಇಟ್ಟುಕೊಳ್ಳಬೇಕು. ಯಾವ ಚುನಾವಣಾ ಆಯೋಗದ ಮೂಲಕ ಇವರು ಆಯ್ಕೆಯಾಗಿದ್ದಾರೆ. ಅದನ್ನೇ ತಿರಸ್ಕಾರ ಮಾಡುವ ಕೆಲಸ ಮಾಡುತ್ತಿದ್ದಾರೆ. ಒಟ್ಟಾರೆ ದೇಶದಲ್ಲಿ ಸಂವಿಧಾನ ಬದ್ಧವಾಗಿ ಸ್ಥಾಪಿತವಾಗಿರುವ ಸಂಸ್ಥೆಯ ಮೇಲೆ ಸಂಶಯ ಮೂಡಿಸಿ ಅರಾಜಕತೆ ಮೂಡಿಸುವ ಕೆಲಸ ಮಾಡಿ ಕಾಂಗ್ರೆಸ್‌ ದೇಶಕ್ಕೆ ದೊಡ್ಡ ಅಪಚಾರ ಮಾಡುತ್ತಿದೆ ಎಂದು ದೂರಿದರು.

ಅಭಿವೃದ್ಧಿ ಶೂನ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಶೂನ್ಯವಾಗಿದ್ದು, ಅದನ್ನು ಮುಚ್ಚ ಹಾಕಲು ಒಂದಿಲ್ಲೊಂದು ಜನರಿಗೆ ಪ್ರಯೋಜನ ಇಲ್ಲದ ವಿಷಯಗಳನ್ನು ತೆಗೆದುಕೊಂಡು ತಮ್ಮ ವೈಫಲ್ಯ ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರದಲ್ಲಿ ನವೆಂಬ‌ರ್ ಕ್ರಾಂತಿಯ ಕುರಿತ ಪಶ್ನೆಗೆ ಪ್ರತಿಕ್ರಿಯಿಸಿ, ಅವರ ಮಧ್ಯ ಏನು ಕ್ರಾಂತಿ ಇದೆ ಅದು ನನಗೆ ಸಂಬಂಧ ಇಲ್ಲ. ಇದೇ ರೀತಿ ಆಡಳಿತ ಮಾಡಿದರೆ ಜನರು ಬಹಳ ಬೇಸತ್ತಿದ್ದಾರೆ. ಸಿದ್ದರಾಮಯ್ಯ ಅವರಿಂದ ಜನರು ಈ ರೀತಿಯ ಆಡಳಿತ ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | ಆರೆಸ್ಸೆಸ್‌ ಗುರಿಯಾಗಿಸಿದ್ದ ನಿರ್ಬಂಧ ಆದೇಶಕ್ಕೆ ತಾತ್ಕಾಲಿಕ ತಡೆ; ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯ: ಜೋಶಿ

ರಸ್ತೆ ಗುಂಡಿಗಳ ನಿರ್ವಹಣೆಗೂ ಹಣ ಇಲ್ಲ. ಇದರ ಮೇಲೆ ಮಳೆ ಬಿದ್ದಿದೆ. ಇದರಿಂದ ರಸ್ತೆ ಗುಂಡಿಗಳು ಬಿದ್ದಿವೆ. ಆ ಬಗ್ಗೆ ಚಿಂತನೆ ಮಾಡುವ ಮಂತ್ರಿಗಳು ಇಲ್ಲ. ಮುಖ್ಯಮಂತ್ರಿಯೂ ಇಲ್ಲ. ಹಣ ಇಲ್ಲದ ಕಾರಣ ಎಲ್ಲವೂ ಅಧೋಗತಿಗೆ ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.