Haveri News: ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯಾರ್ಥಿ ಸಾವು, ಇಬ್ಬರಿಗೆ ಗಂಭೀರ ಗಾಯ
Haveri News: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ನಡೆದಿದೆ. ಶಾಲೆಯ ಆವರಣದಲ್ಲಿದ್ದ ತೆಂಗಿನಮರದ ಬಳಿ ಹಾದು ಹೋಗಿದ್ದ ವಿದ್ಯುತ್ ತಂತಿ ಬಿದ್ದು ಅವಘಡ ನಡೆದಿದೆ. ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದು, ಇನ್ನಿಬ್ಬರು ಬಾಲಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.


ಹಾವೇರಿ: ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗಳಾಗಿರುವ ಘಟನೆ ಹಾವೇರಿ ಜಿಲ್ಲೆಯ (Haveri News) ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ನಡೆದಿದೆ. ಶಾಲೆಯ ಆವರಣದಲ್ಲಿದ್ದ ತೆಂಗಿನಮರದ ಬಳಿ ಹಾದು ಹೋಗಿದ್ದ ವಿದ್ಯುತ್ ತಂತಿ ಬಿದ್ದು ಅವಘಡ ನಡೆದಿದೆ.
ಹಂಸಭಾವಿ ಗ್ರಾಮದ ಮೃತ್ಯುಂಜಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅವಘಡ ಸಂಭವಿಸಿದೆ. ಮಹಮ್ಮದ್ ಶಾ ಗೌಸ್ ರಟ್ಟಿಹಳ್ಳಿ (12) ಮೃತ ಬಾಲಕ. ಇನ್ನಿಬ್ಬರು ಬಾಲಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಲ್ಲಿ ಮಧ್ನಾಹ್ನ ಊಟಕ್ಕೆ ಬಿಟ್ಟ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿಯಲ್ಲಿ ಭೀಕರ ಅಪಘಾತ; ಲಾರಿ-ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ
ಮಡಿಕೇರಿ: ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ವರು ಮೃತಪಟ್ಟಿರುವುದು (Madikeri accident) ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಎಂಬಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಶಿಬ್ ಮತ್ತು ರಿಶು ಮೃತರು ಎಂದು ತಿಳಿದುಬಂದಿದೆ.
ಕಾರಿನಲ್ಲಿ ಉಳ್ಳಾಲದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಕಾರು ಡಿಕ್ಕಿಯಾಗಿದ್ದರಂದ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸುಳ್ಯದ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.