ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Haveri News: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಉರ್ದು ಶಾಲೆ ಶಿಕ್ಷಕನಿಗೆ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಘಟನೆ ನಡೆದದಿದೆ. ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶಾಲೆಯ ಬಳಿ ಜಮಾಯಿಸಿದ ಸ್ಥಳೀಯರು, ಶಿಕ್ಷಕನಿಗೆ ಮನಬಂದಂತೆ ಥಳಿಸಿ, ಕೊರಳಿಗೆ ಚಪ್ಪಲಿ ಹಾರ ಹಾಕಿ ಶಾಲೆಯಿಂದ ಪೊಲೀಸ್ ಠಾಣೆವರೆಗೂ ಮೆರವಣಿಗೆ ಕರೆದೊಯ್ದಿದ್ದಾರೆ.

ವಿದ್ಯಾರ್ಥಿನಿಗೆ ಕಿರುಕುಳ; ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಸವಣೂರಿನಲ್ಲಿ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ. -

Prabhakara R
Prabhakara R Dec 10, 2025 8:41 PM

ಹಾವೇರಿ, ಡಿ.10: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶಿಕ್ಷಕನಿಗೆ ಸ್ಥಳೀಯರು ಮನಬಂದಂತೆ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿರುವ ಜಿಲ್ಲೆಯ (Haveri News) ಸವಣೂರು ಪಟ್ಟಣದಲ್ಲಿ ನಡೆದಿದೆ. ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಶಾಲೆಯ ಬಳಿ ಜಮಾಯಿಸಿದ ಸ್ಥಳೀಯರು, ಶಿಕ್ಷಕನಿಗೆ ಮನಬಂದಂತೆ ಥಳಿಸಿದ್ದಾರೆ. ಈ ವೇಳೆ ಇಡೀ ಗ್ರಾಮವೇ ನೋಡುವಂತೆ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾರ ಹಾಕಿ ಶಾಲೆಯಿಂದ ಪೊಲೀಸ್ ಠಾಣೆವರೆಗೂ ಮೆರವಣಿಗೆ ಕರೆದೊಯ್ದಿದ್ದು, ಶಿಕ್ಷಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸವಣೂರು ಪಟ್ಟಣದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕ ಜಗದೀಶ್‌ ಎಂಬಾತನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಹೀಗಾಗಿ ಆಕ್ರೋಶಗೊಂಡ ಪೋಷಕರು, ಶಾಲೆಗೆ ತೆರಳಿ ಶಿಕ್ಷಕನಿಗೆ ಧರ್ಮದೇಟು ಕೊಟ್ಟಿದ್ದಾರೆ. ಬಳಿಕ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾರ ಹಾಕಿ ರಸ್ತೆಯಲ್ಲಿ ಮೆರವಣಿಗೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಶಿಕ್ಷಕನಿಗೆ ಥಳಿಸಿರುವ ವಿಡಿಯೋ



ಘಟನೆ ಬಗ್ಗೆ ಮಾಹಿತಿ ನೀಡಿರುವ ಅಂಜುಮನ್ ಕಮಿಟಿ ಮುಖಂಡ ಸಲೀಂ, 'ಶಿಕ್ಷಕನ ವರ್ತನೆಯಿಂದ ಬೇಸತ್ತು ಸಾರ್ವಜನಿಕರು ಥಳಿಸಿ, ಮೆರವಣಿಗೆ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಬಾಲಕಿಯೊಬ್ಬಳಿಗೆ ಹೊಟ್ಟೆ ನೋವು, ಜ್ವರ ಬಂದಿತ್ತು. ಆಕೆಯನ್ನು ವಿಚಾರಿಸಿದಾಗ ಜಗದೀಶ್ ದೌರ್ಜನ್ಯ ಎಸಗಿರುವುದು ಗೊತ್ತಾಗಿದೆ. ಶಾಲೆಯ 7 ಬಾಲಕಿಯರ ಮೇಲೆ ಶಿಕ್ಷಕ ದೌರ್ಜನ್ಯ ಎಸಗಿರುವ ಮಾಹಿತಿಯಿದೆ ಎಂದು ಎಂದು ತಿಳಿಸಿದ್ದಾರೆ.

ಜೂನಿಯರ್‌ಗಳಿಂದ ಸೀನಿಯರ್ ಮೇಲೆ ಹಲ್ಲೆ: 12ನೇ ತರಗತಿ ವಿದ್ಯಾರ್ಥಿ ಸಾವು

ಆರೋಪಿ ಶಿಕ್ಷಕ ಸದ್ಯ ಪೊಲೀಸ್ ಠಾಣೆಯಲ್ಲಿದ್ದಾನೆ. ಆತನ ಮೇಲೆ ದೂರು ನೀಡಲು ಪೋಷಕರು ನಿರಾಕರಿಸುತ್ತಿದ್ದಾರೆ. ಶಿಕ್ಷಣ ಇಲಾಖೆಯಿಂದಲೇ ದೂರು ದಾಖಲಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.