ಕೋಡಿಯಾಲ ಹೊಸಪೇಟೆ ಯುವಕನ ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Haveri News: ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕೋಡಿಯಾಲ ಹೊಸಪೇಟೆಯಲ್ಲಿ ನಡೆದಿದ್ದ ಯುವಕ ಪುನೀತಕುಮಾರ ಶಿಗ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಯಶೋಧಾ ವಂಟಗೋಡಿ ಅವರು ತಿಳಿಸಿದ್ದಾರೆ.
-
ಹಾವೇರಿ, ಸೆ.25: ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕೋಡಿಯಾಲ ಹೊಸಪೇಟೆ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಮಾಹಿತಿ ನೀಡಿದ್ದಾರೆ.
ಕೋಡಿಯಾಲ ಹೊಸಪೇಟೆಯ ಪುನೀತಕುಮಾರ ಶಿಗ್ಲಿ (28) ಸಾವು ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ನಂದಿಗಾವಿ (26) ಹಾಗೂ ಅಭಿಷೇಕ ಚಂದ್ರಪ್ಪ ಗೋಣೆಪ್ಪನವರ (21) ಎಂಬ ಇಬ್ಬರನ್ನು ಬಂಧಿಸಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಪ್ರಕರಣದ ಹಿನ್ನೆಲೆ, ಆರೋಪಿಗಳ ಪಾತ್ರ ಹಾಗೂ ಘಟನೆಗೆ ಕಾರಣವಾದ ಅಂಶಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ತನಿಖೆಯ ಬಳಿಕ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಬರ್ತ್‌ಡೇ ಪಾರ್ಟಿ ನಂತರ ನಾಪತ್ತೆಯಾಗಿದ್ದ ಗ್ರಾಮದ ಮುಖ್ಯಸ್ಥನ ಪುತ್ರ ಶವವಾಗಿ ಪತ್ತೆ; ಮೈ ತುಂಬ ಗಾಯ
ಘಟನೆ ನಡೆದ ಸ್ಥಳ ಹಾಗೂ ಸಂಬಂಧಪಟ್ಟವರ ವಿಚಾರಣೆ ನಡೆಸಿರುವ ಪೊಲೀಸರು, ಪ್ರಕರಣದ ಸಂಪೂರ್ಣ ಹಿನ್ನೆಲೆಯನ್ನು ಪರಿಶೀಲಿಸುತ್ತಿದ್ದಾರೆ. ಇಬ್ಬರು ಆರೋಪಿಗಳ ಬಂಧನದೊಂದಿಗೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದ್ದು, ಮುಂದಿನ ತನಿಖೆ ತೀವ್ರಗೊಂಡಿದೆ. ಎಸ್ಪಿ ಯಶೋಧಾ ವಂಟಗೋಡಿ ಅವರ ನೇತೃತ್ವದಲ್ಲಿ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.