ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ranya Rao case: ನಟಿ ರನ್ಯಾ ರಾವ್‌ಗೆ ಶಾಕ್‌; ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Ranya Rao case: ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆ ರನ್ಯಾರಾವ್ ಪರ ವಕೀಲರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕರ್ನಾಟಕ ಹೈಕೋರ್ಟ್‌ ಕೂಡ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ನಟಿ ರನ್ಯಾ ರಾವ್‌ಗೆ ಶಾಕ್‌; ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Profile Prabhakara R Apr 26, 2025 1:27 PM

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ಆರೋಪಿ ನಟಿ ರನ್ಯಾರಾವ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಇದರಿಂದ ನಟಿಗೆ ಸದ್ಯ ಜೈಲೇ ಗತಿಯಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ಆರೋಪಿ ರನ್ಯಾರಾವ್ ಹಾಗೂ ಎ2 ಆರೋಪಿ ತರುಣ್ ರಾವ್ ಜಾಮೀನು ಅರ್ಜಿಯನ್ನು ಶನಿವಾರ ವಜಾಗೊಳಿಸಿದೆ.

ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆ ರನ್ಯಾರಾವ್ ಪರ ವಕೀಲರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 64ನೇ ಸೆಷನ್ಸ್ ಕೋರ್ಟ್ ನಟಿಯ ಜಾಮೀನು ಅರ್ಜಿ ವಜಾಗೊಳಿಸಿದ್ದ ಹಿನ್ನೆಲೆ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್‌ನಲ್ಲೂ ನಟಿಗೆ ಹಿನ್ನಡೆಯಾಗಿದೆ.

ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಮಾರ್ಚ್‌ 3ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿತ್ತು. ಹೀಗಾಗಿ ಡಿಆರ್‌ಐ ಅಧಿಕಾರಿಗಳು ನಟಿಯನ್ನು ವಶಕ್ಕೆ ಪಡೆದು ಬಂಧಿಸಿದ್ದರು. ರನ್ಯಾ ರಾವ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಗೋಲ್ಡ್‌ ಲೇಡಿ ರನ್ಯಾ ವಿರುದ್ಧ ಕಾಫಿಪೋಸಾ ಕೇಸು, ಇನ್ನೊಂದು ವರ್ಷ ಅಂದರ್

Ranya Rao (3)

ಬೆಂಗಳೂರು: ಚಿನ್ನಾಭರಣ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (actress Ranya Rao case) ವಿರುದ್ಧ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆ ತಡೆ ಕಾಯ್ದೆ (COFEPOSA ACT) 1974 ಅನ್ವಯ ದೂರು ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ (CEIB) COFEPOSA ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಕಾಯ್ದೆ ಅನ್ವಯ ಆರೋಪಿ ರನ್ಯಾ ರಾವ್‌ಗೆ ಒಂದು ವರ್ಷ ಜಾಮೀನು ಪಡೆಯಲು ಅವಕಾಶವಿರುವುದಿಲ್ಲ.

ಆರೋಪಿಗಳು ಜಾಮೀನಿನ ಮೇಲೆ ಹೊರಬಂದ ನಂತರ ಕಳ್ಳಸಾಗಾಣಿಕೆಯಲ್ಲಿ ತೊಡಗುವುದನ್ನು ತಡೆಯುವ ಸಲುವಾಗಿ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಆರೋಪಿಯು ತನಿಖಾ ಸಂಸ್ಥೆಗಳೊಂದಿಗೆ ಸಹಕರಿಸದಿರುವುದು ಕಂಡುಬಂದರೆ ಈ ಕಾಯ್ದೆಯನ್ನು ಸಹ ಅನ್ವಯಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದಲ್ಲಿ ರನ್ಯಾ ರಾವ್ ಮತ್ತು ಇತರರು ಜಾಮೀನು ಪಡೆಯಲು ಪದೇ ಪದೆ ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರೀಯ ಸಂಸ್ಥೆಗಳು ಈ ಕ್ರಮಕ್ಕೆ ಮುಂದಾಗಿವೆ ಎಂದು ಮೂಲಗಳು ಬಹಿರಂಗಪಡಿಸಿವೆ. ಇತರ ಆರೋಪಿಗಳಾದ ತರುಣ್ ರಾಜು ಮತ್ತು ಸಾಹಿಲ್ ಸಕರಿಯಾ ಜೈನ್ ವಿರುದ್ಧವೂ ಕಾಫಿಪೋಸಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Self Harming: ಗೆಳತಿ ಸೈಕಲ್‌ ಕೊಡಲಿಲ್ಲ ಎಂದು ಪುಟ್ಟ ಬಾಲಕಿ ಆತ್ಮಹತ್ಯೆ

ರೂ. 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲ ಮಗಳು ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಲಾಗಿತ್ತು. ರನ್ಯಾ ರಾವ್ ಮತ್ತು ಪ್ರಕರಣದ ಇತರ ಇಬ್ಬರು ಆರೋಪಿಗಳು ಪ್ರಸ್ತುತ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ. ಈ ಪ್ರಕರಣವನ್ನು ಡಿಆರ್‌ಐ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ.