ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bike Taxi Service: ರ‍್ಯಾಪಿಡೋ ಸೇರಿ ಇನ್ನಿತರ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಲು ಹೈಕೋರ್ಟ್‌ ಆದೇಶ

Bike Taxi Service: ರ‍್ಯಾಪಿಡೋ, ಓಲಾ, ಉಬರ್ ಸೇರಿದಂತೆ ಇತರೆ ಎಲ್ಲಾ ಬೈಕ್ ಟ್ಯಾಕ್ಸಿಗಳ ಸೇವೆ ನಿಲ್ಲಿಸಬೇಕು. ಇದಕ್ಕೆ ಸಂಬಂಧಿಸಿ 3 ತಿಂಗಳ ಒಳಗಾಗಿ ಮಾರ್ಗಸೂಚಿ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಲು ಹೈಕೋರ್ಟ್‌ ಆದೇಶ

Profile Prabhakara R Apr 2, 2025 5:14 PM

ಬೆಂಗಳೂರು: ಬೈಕ್‌ ಟ್ಯಾಕ್ಸಿ ಸೇವೆ (Bike Taxi Service) ನೀಡುತ್ತಿರುವ ರ‍್ಯಾಪಿಡೋ ಸೇರಿ ಇನ್ನಿತರ ಸಂಸ್ಥೆಗಳಿಗೆ ಹೈಕೋರ್ಟ್‌ ಶಾಕ್‌ ನೀಡಿದೆ. ಸರ್ಕಾರ ಮೋಟಾರು ವಾಹನ ಕಾಯ್ದೆ, 1988ರ ಸೆಕ್ಷನ್ 3ರಡಿ ಮಾರ್ಗಸೂಚಿಗಳನ್ನು ರೂಪಿಸುವವರೆಗೆ ಬೈಕ್‌ ಟ್ಯಾಕ್ಸಿಗಳು ಕಾರ್ಯನಿರ್ವಹಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದ್ದು, ಮುಂದಿನ 6 ವಾರಗಳ ಒಳಗಾಗಿ ರಾಜ್ಯದಲ್ಲಿರುವ ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿರ್ಬಂಧಿಸುವಂತೆ ಸರ್ಕಾರಕ್ಕೆ ಆದೇಶ ನೀಡಿದೆ. ರ‍್ಯಾಪಿಡೋ, ಓಲಾ, ಉಬರ್ ಸೇರಿದಂತೆ ಇತರೆ ಎಲ್ಲಾ ಬೈಕ್ ಟ್ಯಾಕ್ಸಿಗಳ ಸೇವೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿರುವ ಹೈಕೋರ್ಟ್‌, ಇದಕ್ಕೆ ಸಂಬಂಧಿಸಿ 3 ತಿಂಗಳ ಒಳಗಾಗಿ ಮಾರ್ಗಸೂಚಿ ಹೊರಡಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿದೆ.

ರ‍್ಯಾಪಿಡೋ, ಉಬರ್, ಓಲಾ ಮತ್ತು ಇತರ ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ನಿಗದಿತ ಅವಧಿಯೊಳಗೆ ತಮ್ಮ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಹೇಳಿದ್ದಾರೆ. ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅಗತ್ಯ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ.

ಈ ಸುದ್ದಿಯನ್ನೂ ಓದಿ | BBMP Parking tax: ಬೆಂಗಳೂರಿಗರೇ ಇನ್ನೊಂದು ಬೆಲೆ ಏರಿಕೆಗೆ ಸಿದ್ಧರಾಗಿ! ಪಾರ್ಕಿಂಗ್‌ ಇನ್ನು ದುಬಾರಿ

ಸರ್ಕಾರ ಸೂಕ್ತ ನಿಯಮಗಳನ್ನು ಜಾರಿ ಮಾಡುವವರೆಗೆ ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅಥವಾ ಅಂತಹ ಸೇವೆಗಳಿಗೆ ಪರವಾನಗಿ ನೀಡಲು ಸಾರಿಗೆ ಇಲಾಖೆ ಅನುಮತಿ ನೀಡಬಾರದು ಎಂದು ಕೋರ್ಟ್‌ ಸೂಚಿಸಿದೆ.

ರ‍್ಯಾಪಿಡೋ ಸೇರಿ ಹಲವು ಕಂಪನಿಗಳು ಯೆಲ್ಲೋ ಬೋರ್ಡ್‌ ಇಲ್ಲದೇ ಅಕ್ರಮವಾಗಿ ಬೈಕ್‌ ಟ್ಯಾಕ್ಸಿ ಸೇವೆ ನೀಡುತ್ತಿವೆ. ನಿಯಮಬಾಹಿರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಬೈಕ್‌ ಟ್ಯಾಕ್ಸಿ ಕಂಪನಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಟೋ ಹಾಗೂ ಕ್ಯಾಬ್‌ ಚಾಲಕರು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಇದೀಗ ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್‌ ತಾತ್ಕಾಲಿಕ ನಿರ್ಬಂಧವನ್ನು ವಿಧಿಸಿದೆ.