ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

HD Kumaraswamy: ರೈತರ ಜತೆ ಸೌಜನ್ಯದಿಂದ ವರ್ತಿಸಿ: ಬ್ಯಾಂಕ್‌ಗಳಿಗೆ ಎಚ್.ಡಿ.ಕುಮಾರಸ್ವಾಮಿ ಸೂಚನೆ

HD Kumaraswamy: ನಾನಾ ಉದ್ದೇಶಗಳಿಗೆ ರೈತರು ಪಡೆಯುವ ಸಾಲಗಳಿಗೆ ಬಡ್ಡಿ ಜಾಸ್ತಿ ಎನ್ನುವ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಅವರು ಏಕಕಾಲಕ್ಕೆ ತಮ್ಮ ಸಾಲವನ್ನು ಪಾವತಿ ಮಾಡಲು ಮುಂದಾಗುತ್ತಿದ್ದಾರೆ. ಅಂತಹ ರೈತರಿಗೆ ಬ್ಯಾಂಕುಗಳು ಸಹಕರಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದ್ದಾರೆ.

ಮಂಡ್ಯ: ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್‌ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಃ ಸಾಲ ನೀಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ‌ (HD Kumaraswamy) ಅವರು ಬ್ಯಾಂಕುಗಳಿಗೆ ಸೂಚಿಸಿದರು. ಮಂಡ್ಯದಲ್ಲಿ ನಡೆದ ಜಿಲ್ಲಾ ಬ್ಯಾಂಕರುಗಳ ಸಭೆಯಲ್ಲಿ ಆನ್‌ಲೈನ್ ವೇದಿಕೆ ಮೂಲಕ ಭಾಗಿಯಾಗಿ ಮಾತನಾಡಿದ ಅವರು, ನಾನಾ ಉದ್ದೇಶಗಳಿಗೆ ರೈತರು ಪಡೆಯುವ ಸಾಲಗಳಿಗೆ ಬಡ್ಡಿ ಜಾಸ್ತಿ ಎನ್ನುವ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಅವರು ಏಕಕಾಲಕ್ಕೆ ತಮ್ಮ ಸಾಲವನ್ನು ಪಾವತಿ ಮಾಡಲು ಮುಂದಾಗುತ್ತಿದ್ದಾರೆ. ಅಂತಹ ರೈತರಿಗೆ ಬ್ಯಾಂಕುಗಳು ಸಹಕರಿಸಬೇಕು ಎಂದು ಹೇಳಿದರು.

ಕೃಷಿಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರ ಸಾಲದ ಬಡ್ಡಿ ಹೆಚ್ಚಾಗಿದೆ ಎಂದು ದಿನವೂ ದೂರುಗಳು ಬರುತ್ತಿವೆ. ಅದಕ್ಕಾಗಿಯೇ ಅವರು ಒಂದೇ ಬಾರಿಗೆ ಹಣ ಪಾವತಿ ಮಾಡಲು ಶ್ರಮಿಸುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಬ್ಯಾಂಕುಗಳು ಸೌಜನ್ಯದಿಂದ ವರ್ತಿಸಬೇಕು. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಠಿಣವಾಗಿ ನಡೆದುಕೊಳ್ಳಬೇಡಿ ಎಂದು ಕೇಂದ್ರ ಸಚಿವರು ಸ್ಪಷ್ಟ ಸೂಚನೆ ಕೊಟ್ಟರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅನೇಕ ಯೋಜನೆಗಳ ಮೂಲಕ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗುತ್ತಿದೆ. ಅವರ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮೋದಿ ಅವರು ಜಾರಿಗೆ ತಂದಿರುವ ಯೋಜನೆಗಳ ಸೌಲಭ್ಯಗಳನ್ನು ಜಾರಿಗೆ ತಲುಪಿಸುವ ಕೆಲಸವನ್ನು ಬ್ಯಾಂಕುಗಳು ಉತ್ತಮವಾಗಿ ಮಾಡುತ್ತಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಯುವಕರು, ಮಹಿಳೆಯರು, ಕೃಷಿಕರು ಕೇಂದ್ರದ ಯೋಜನೆಗಳ ಸೌಲಭ್ಯ ಪಡೆಯಲು ಬ್ಯಾಂಕುಗಳು ಸೇತುವೆಯಾಗಿವೆ. ಇದು ಮತ್ತಷ್ಟು ವಿಸ್ತೃತವಾಗಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಚಿವರು ಸಲಹೆ ನೀಡಿದರು.

ಈ ಸುದ್ದಿಯನ್ನೂ ಓದಿ | Election Commission: ಹೆಸರಿಗೆ ಮಾತ್ರ ಇರುವ 345 ರಾಜಕೀಯ ಪಕ್ಷಗಳನ್ನು ಕೈಬಿಟ್ಟ ಚುನಾವಣಾ ಆಯೋಗ

ಇದೇ ವೇಳೆ ವಾರ್ಷಿಕ ಆರ್ಥಿಕ ಕ್ರೆಡಿಡ್ ರಿಪೋರ್ಟ್ ಬಿಡುಗಡೆ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಜಿಲ್ಲೆಯ ಬ್ಯಾಂಕ್‌ಗಳ ಮುಖ್ಯಸ್ಥರು ಭಾಗಿಯಾಗಿದ್ದರು.