HD Kumaraswamy: ಎಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ
HD Kumaraswamy: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಳೆದ ಎರಡು ಮೂರು ತಿಂಗಳಿಂದ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು, ಕೆಮ್ಮು ಕಡಿಮೆಯಾಗುತ್ತಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಾಜಿ ಸಿಎಂ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.


ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕಳೆದ ಎರಡು ಮೂರು ತಿಂಗಳಿಂದ ಕುಮಾರಸ್ವಾಮಿ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು, ಕೆಮ್ಮು ಕಡಿಮೆಯಾಗುತ್ತಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಾಜಿ ಸಿಎಂ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ಜಿಂದಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅಪೋಲೋ ಆಸ್ಪತ್ರೆಯಲ್ಲಿಯೂ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ವೈದ್ಯರ ಸಲಹೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಎರಡು ವಾರಗಳ ಕಾಲ ವಿದೇಶದಲ್ಲಿ ಚಿಕಿತ್ಸೆ ಪಡೆಯುವ ಅವಶ್ಯಕತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಈ ಸುದ್ದಿಯನ್ನೂ ಓದಿ | CM Siddaramaiah: ರಾಜ್ಯದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿ: ಸಿಎಂ ಸಿದ್ದರಾಮಯ್ಯ
ಕಳೆದ ವರ್ಷದ ಮಾರ್ಚ್‌ನಲ್ಲಿ ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಅವರು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಹಿನ್ನೆಲೆ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ.