ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Heart Attack: ನಿಷ್ಕರುಣಿ ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

Heart Attack: ಮೃತ ವಿದ್ಯಾರ್ಥಿನಿಯನ್ನು ಕಾಳಂಗೇರಿಯ ದೀಕ್ಷಾ (12) ಎಂದು ಗುರುತಿಸಲಾಗಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಸಿದ್ಧಳಾಗಿ ಶಾಲೆಗೆ ಹೋಗುತ್ತಿದ್ದಳು. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದವಳನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ.

ನಿಷ್ಕರುಣಿ ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಮೃತ ದೀಕ್ಷಾ

ಹರೀಶ್‌ ಕೇರ ಹರೀಶ್‌ ಕೇರ Jul 15, 2025 10:36 AM

ಬಳ್ಳಾರಿ: ರಾಜ್ಯದಲ್ಲಿ ಹೃದಯಾಘಾತದಿಂದ (heart attack) ಸಂಭವಿಸುತ್ತಿರುವ ಸರಣಿ ಸಾವುಗಳು ಮುಂದುವರಿದಿವೆ. ಇದೀಗ ಬಳ್ಳಾರಿಯಲ್ಲಿ ವಿದ್ಯಾರ್ಥಿನಿಯೊಬ್ಬಳು (Student) ಸಾವನ್ನಪ್ಪಿದ್ದಾಳೆ. 6ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ತೆರಳುತ್ತಿರುವಾಗಲೇ ಹೃದಯಾಘಾತದಿಂದ (Heart failure) ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಈ ದುರಂತ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಕಾಳಂಗೇರಿಯ ದೀಕ್ಷಾ (12) ಎಂದು ಗುರುತಿಸಲಾಗಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಸಿದ್ಧಳಾಗಿ ಶಾಲೆಗೆ ಹೋಗುತ್ತಿದ್ದಳು. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದ ಬಾಲಕಿ ದೀಕ್ಷಾಳನ್ನು ಕೂಡಲೇ ಕುಟುಂಬಸ್ಥರು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲು ಮುಂದಾದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ದೀಕ್ಷಾ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಚೇರಿಗೆ ಹೊರಡುತ್ತಿದ್ದ ನೌಕರ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಕಚೇರಿಗೆ ಹೊರಡುತ್ತಿದ್ದಾಗಲೇ FDA ನೌಕರರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹಾಸನ ಮೂಲದ ಸತೀಶ್ (46) ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಸತೀಶ್ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಳಿಗ್ಗೆ ಮನೆಯಲ್ಲಿ ಸ್ನಾನ ಮಾಡಿ ಬರುವಾಗ ಸತೀಶ್ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಪತ್ನಿ ತೆರಳಿದ್ದಾರೆ. ಆಸ್ಪತ್ರೆಗೆ ಹೋದಾಗ ಸತೀಶ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಕುಷ್ಟಗಿ ಶಾಸಕರ ಪಿಎ ಸಾವು

ಕೊಪ್ಪಳ: ಹಾಸನ ಮಾತ್ರವಲ್ಲದೆ ರಾಜ್ಯದ ಇತರ ಜಿಲ್ಲೆಗಳಲ್ಲೂ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿರುವುದು ಕಂಡುಬಂದಿದೆ. ಈ ನಡುವೆ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿವಾಸಿ ಚಂದ್ರಕಾಂತ ವಡ್ಡಿಗೇರಿ (46) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಕುಷ್ಟಗಿ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಬಳಿ ಪಿಎ ಆಗಿ ಕೆಲಸ ಮಾಡುತ್ತಿದ್ದರು.

ಕಳೆದ 20 ವರ್ಷಗಳಿಂದ ದೊಡ್ಡನಗೌಡ ಪಾಟೀಲ್​ರ ಬಳಿಯೇ ಕೆಲಸ ಮಾಡುತ್ತಿದ್ದ ಚಂದ್ರಕಾಂತ ವಡ್ಡಿಗೇರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕುಷ್ಟಗಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಂದ್ರಕಾಂತ ವಡ್ಡಿಗೇರಿ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಂದ್ರಕಾಂತ ವಡ್ಡಿಗೇರಿ ಅವರು ಪುರಸಭೆ ಮಾಜಿ ಸದಸ್ಯರೂ ಆಗಿದ್ದರು.

ಇದನ್ನೂ ಓದಿ: Bus Accident: ಡ್ರೈವಿಂಗ್‌ನಲ್ಲೇ ಹೃದಯಾಘಾತದಿಂದ ಚಾಲಕ ಸಾವು; ಪಾದಚಾರಿ ಮೇಲೆ ಹರಿದ ಬಸ್‌