ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Karnataka Weather: ಚಳಿಗಾಲದಲ್ಲೂ ಬಿಸಿಲಿನ ಅಬ್ಬರ; ಮುಂದಿನ 6 ದಿನ ರಾಜ್ಯಾದ್ಯಂತ ಒಣ ಹವೆ

Karnataka Weather: ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಮೋಡವಿಲ್ಲದ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 ಡಿಗ್ರಿ ಸೆಲ್ಸಿಯಸ್ ಮತ್ತು 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಚಳಿಗಾಲದಲ್ಲೂ ಬಿಸಿಲಿನ ಅಬ್ಬರ; ಮುಂದಿನ 6 ದಿನ ರಾಜ್ಯಾದ್ಯಂತ ಒಣ ಹವೆ

Profile Prabhakara R Feb 15, 2025 5:42 PM

ಬೆಂಗಳೂರು: ಚಳಿಗಾಲದಲ್ಲೂ ರಾಜ್ಯದ ಬಹುತೇಕ ಕಡೆ ಬಿಸಿಲಿನ ಪ್ರಮಾಣ ಏರಿಕೆಯಾಗಿದ್ದು, ಒಣ ಹವೆ ಕಂಡುಬರುತ್ತಿದೆ. ಮುಂದಿನ 6 ದಿನಗಳ ಕಾಲ ಕೂಡ ರಾಜ್ಯಾದ್ಯಂತ ಒಣ ಹವೆ (Karnataka Weather) ಇರುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಮುಖ್ಯವಾಗಿ ಮೋಡವಿಲ್ಲದ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಶುಕ್ರವಾರ, ಚಾಮರಾಜನಗರದಲ್ಲಿ ರಾಜ್ಯದಲ್ಲೇ ಅತೀ ಕಡಿಮೆ ಉಷ್ಣಾಂಶ 13.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಇನ್ನು ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ 36.6 ಡಿ.ಸೆ. ದಾಖಲಾಗಿದೆ.

ರಾಜ್ಯದ ಕಡಿಮೆ ಉಷ್ಣವಲಯದ ಮಟ್ಟಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಉತ್ತರ, ಈಶಾನ್ಯ ಗಾಳಿ ಇರುತ್ತವೆ. ದಕ್ಷಿಣ ಒಳನಾಡಿನಲ್ಲಿ ಈಸ್ಪರ್ಲೀನ್/ಪೂರ್ವ-ಆಗ್ನೆಯ ಗಾಳಿ ಇರುತ್ತವೆ.

ಫೆ.16ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು/ಮಂಜು ಇರುವ ಸಾಧ್ಯತೆ ಇದೆ. ಇನ್ನು ಫೆ.17 ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಫೆ. 21ರವರೆಗೆ ಇದೇ ರೀತಿಯ ಹವಾಮಾನ ಇರಲಿದೆ.

ತಾಪಮಾನದ ಮುನ್ಸೂಚನೆ

ಮುಂದಿನ 2 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ ಮತ್ತು ಒಳನಾಡಿನಲ್ಲಿ ನಂತರದ 3 ದಿನಗಳವರೆಗೆ 2-3 ಡಿಗ್ರಿ ಸೆಲ್ಸಿಯಸ್‌ ಯ ಏರಿಕೆಯಾಗಲಿದೆ. ಮುಂದಿನ 2 ದಿನಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಿರುವ ಸಾಧ್ಯತೆ ಇದೆ ಮತ್ತು ನಂತರದ 3 ದಿನಗಳಲ್ಲಿ ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್‌ ವರೆಗೆ ಹೆಚ್ಚಿರುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ರಾಜ್ಯದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಮೋಡವಿಲ್ಲದ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 18°C ಇರುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಗುರುವಾರ ಕನಿಷ್ಠ ತಾಪಮಾನವು ಕರಾವಳಿಯಲ್ಲಿ 23-24 °C ವ್ಯಾಪ್ತಿಯಲ್ಲಿತ್ತು. ಉತ್ತರ ಒಳನಾಡಿನ ಬೆಳಗಾವಿ ವಿಮಾನ ನಿಲ್ದಾಣ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ ಮತ್ತು ಗದಗದಲ್ಲಿ 15-17' C, ಬೆಳಗಾವಿ, ರಾಯಚೂರು, ಕಲಬುರಗಿ, ಹಾವೇರಿ ಮತ್ತು ಕೊಪ್ಪಳದಲ್ಲಿ 18-19 ° C ಮತ್ತು ದಕ್ಷಿಣ ಒಳನಾಡಿನ, ಚಾಮರಾಜನಗರ, ಚಿಕ್ಕಮಗಳೂರು, ಚಿಂತಾಮಣಿ ಎಮ್‌ಏಟಿಟಿಯೂ ಡಾವಣಗೆರೆಯಲ್ಲಿ 13-16 °C, ಆಗುಂಬೆ, ಬೆಂಗಳೂರು, ಚಿತ್ರದುರ್ಗ, ಹಾಸನ, ಮಂಡ್ಯ, ಮಡಿಕೇರಿ ಮತ್ತು ಮೈಸೂರಿನಲ್ಲಿ 17-19 C ದಾಖಲಾಗಿತ್ತು.

ಗರಿಷ್ಠ ತಾಪಮಾನವು ಕರಾವಳಿಯಲ್ಲಿ 32-34 "C ವ್ಯಾಪ್ತಿಯಲ್ಲಿತ್ತು. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ ಮತ್ತು ಕೊಪ್ಪಳದಲ್ಲಿ 32-34 °C, ಧಾರವಾಡ, ಗದಗ, ಕಲಬುರಗಿ ಮತ್ತು ರಾಯಚೂರಿನಲ್ಲಿ 35-37 ° C, ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು ಮತ್ತು ಮಡಿಕೇರಿಯಲ್ಲಿ 34-36°C ಇತ್ತು. ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರಲಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.