Karnataka Rains: ರಾಜ್ಯದಲ್ಲಿ ಮುಂದಿನ 3 ದಿನ ವರುಣಾರ್ಭಟ ಜೋರು; ಎಲ್ಲೆಲ್ಲಿ ಮಳೆಯಾಗಲಿದೆ?
Karnataka weather: ಜೂನ್ 26ರಂದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಜೂನ್ 27 ಮತ್ತು 28ರಂದು ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.


ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಜೂನ್ 26ರಂದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಜೂನ್ 27 ಮತ್ತು 28ರಂದು ಯೆಲ್ಲೋ ಅಲರ್ಟ್ ನೀಡಲಾಗಿದ್ದು, ರಾಜ್ಯದ ಬಹುತೇಕ ಕಡೆ ಗುಡಗು ಸಹಿತ ಮಳೆಯಾಗುವ (Karnataka Rains) ನಿರೀಕ್ಷೆ ಇದೆ.
ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುರುವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) June 25, 2025
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಜೋರಾದ ಗಾಳಿಯೊಂದಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ಇಂದ ಅತಿ ಭಾರಿ ಮಳೆ ಹಾಗೂ ಜೂನ್ 28 ರವರೆಗೆ ಭಾರಿ ಮಳೆ. pic.twitter.com/ap31MvJsqF
ಜೂನ್ 27ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಗದಗ, ಬಾಗಲಕೋಟೆ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬಳ್ಳಾರಿ, ಚಿತ್ರದುರ್ಗ ಸೇರಿ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜೂನ್ 28ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ಹಾಸನ, ಕೋಲಾರ, ಕೊಡಗು ಸೇರಿ ಇತರೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ | Health Tips: ಬಿಯರ್ ಕುಡಿದರೆ ಹೊಟ್ಟೆ ಬರೋದು ನಿಜನಾ? ಆರೋಗ್ಯಕ್ಕೆ ಇದೆಷ್ಟು ಹಾನಿಕಾರಕ?
ಜೂನ್ 29 ಮತ್ತು 30ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.