ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ನಾಳೆ ಕೊಡಗು, ಹಾಸನ ಸೇರಿ ಹಲವೆಡೆ ಗುಡುಗು ಸಹಿತ ಮಳೆ ನಿರೀಕ್ಷೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 22°C ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ.

ನಾಳೆ ಕೊಡಗು, ಹಾಸನ ಸೇರಿ ಹಲವೆಡೆ ಗುಡುಗು ಸಹಿತ ಮಳೆ ನಿರೀಕ್ಷೆ

Profile Prabhakara R Mar 24, 2025 6:07 PM

ಬೆಂಗಳೂರು: ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಭಾನುವಾರ ಗುಡುಗು ಸಹಿತ ಮಳೆಯಾಗಿದೆ. ಇನ್ನು ಮಾ.25ರ ಮಂಗಳವಾರ ಕೂಡ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ / ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 22°C ಇರುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ.

ಇನ್ನು ಮಾ. 26ರಂದು ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮಾ. 27ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಮಾ.28ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.

ಮಾ.29ರಂದು ಮೈಸೂರು, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮಾ.30ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ:

ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ, ನಂತರ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ. ಮುಂದಿನ 5 ದಿನಗಳವರೆಗೆ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಮುಂದಿನ 2 ದಿನಗಳವರೆಗೆ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ, ನಂತರ ಕ್ರಮೇಣ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ.

ಈ ಸುದ್ದಿಯನ್ನೂ ಓದಿ | Health Tips: ಗಂಟೆಗಟ್ಟಲೇ ಕೂತಲ್ಲೇ ಕೆಲ್ಸ ಮಾಡಿ ಬೆನ್ನು ನೋವೇ? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ

ಕಲಬುರಗಿಯಲ್ಲಿ 39 °C ಉಷ್ಣಾಂಶ ದಾಖಲು

ಕಲಬುರಗಿಯಲ್ಲಿ ಭಾನುವಾರ ರಾಜ್ಯದಲ್ಲೇ ಗರಿಷ್ಠ ತಾಪಮಾನ 39 °C ದಾಖಲಾಗಿದೆ. ಇನ್ನು ಬಯಲು ಸೀಮೆಯ ಧಾರವಾಡದಲ್ಲಿ ಕನಿಷ್ಠ ತಾಪಮಾನ 19.5 ವರದಿಯಾಗಿದೆ.