ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ಕರಾವಳಿಯಲ್ಲಿ ಮುಂದಿನ 2 ದಿನ ಭಾರಿ ಮಳೆ ನಿರೀಕ್ಷೆ, Yellow alert; ನದಿ ಪಾತ್ರಗಳಲ್ಲಿ ಪ್ರವಾಹದ ಎಚ್ಚರಿಕೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯೊಂದಿಗೆ ನಿರಂತರ ಗಾಳಿ ಬೀಸಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°c ಮತ್ತು 20°C ಇರುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಮುಂದಿನ 2 ದಿನ ಭಾರಿ ಮಳೆ ನಿರೀಕ್ಷೆ, Yellow alert

Profile Prabhakara R May 30, 2025 6:53 PM

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು, ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ (Karnataka Rains) ನಿರೀಕ್ಷೆ ಇದೆ. ಹೀಗಾಗಿ ಮೇ 31ರಂದು ಭಾರತ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಮುಂದಿನ 24ಗಂಟೆ ಕಾಲ ಧಾರಾಕಾರ ಮಳೆಯಿಂದ ಕರಾವಳಿ ಭಾಗದ ನದಿ, ತೊರೆಗಳಲ್ಲಿ ಒಳಹರಿವು ಹೆಚ್ಚಾಗುವ ಹಿನ್ನೆಲೆಯಲ್ಲಿ ಹಠಾತ್‌ ಪ್ರವಾಹದ ಪರಿಸ್ಥಿತಿ ತಲೆದೋರುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯೊಂದಿಗೆ ನಿರಂತರ ಗಾಳಿ (ಗಾಳಿಯ ವೇಗ ಗಂಟೆಗೆ 40-50 ಕಿ.ಮೀ.) ಬೀಸಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°c ಮತ್ತು 20°C ಇರುವ ಸಾಧ್ಯತೆ ಇದೆ.

ಮೇ 31ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದ‌ರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಾವಣಗೆರೆ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 1ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದಯ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಧಾರವಾಡ, ಹಾವೇರಿ, ಬೆಳಗಾವಿ, ಬೀದ‌ರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ಮಂಡ್ಯ, ತುಮಕೂರು, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.

ಮೇ 2ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Karnataka Rains: ಅನುದಾನದ ಕೊರತೆಯಿಲ್ಲ, ಮಳೆ ಹಾನಿಗೆ ತಕ್ಷಣ ಪರಿಹಾರ ನೀಡಿ: ಡಿಸಿಗಳಿಗೆ ಸಿಎಂ ಸೂಚನೆ

ಮೇ 3 ಮತ್ತು 4ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ವಿಜಯನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ.