Karnataka Rains: ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮುಂಗಾರು ಮಳೆ; ಆರೆಂಜ್ ಅಲರ್ಟ್ ಘೋಷಣೆ!
Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ ಅಥವಾ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ ಮೇಲೆ ಮಂಗಳವಾರ ರಾತ್ರಿ ಸುರಿದ ಮಳೆಯಿಂದ ಭಾರಿ ಪ್ರಮಾಣದ ನೀರು ನಿಂತಿತ್ತು.

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ರಾತ್ರಿ ಬೆಂಗಳೂರು ಸೇರಿ ವಿವಿಧೆಡೆ ವರುಣ ಅಬ್ಬರಿಸಿದ್ದಾನೆ. ಅದೇ ರೀತಿ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ (Karnataka Rains) ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಜೂನ್ 12 ರಿಂದ 15 ರವರೆಗೆ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆಭಾರತ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.
ಜೂನ್ 12ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಗದಗ, ಕೊಪ್ಪಳ, ಯಾದಗಿರಿ, ಕಲಬುರಗಿ, ರಾಯಚೂರು, ಬೀದರ್, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ, ಹಾಸನ ಮೈಸೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಮತ್ತು ಕೋಲಾರ ಜಿಲ್ಲೆಯಲ್ಲಿ ಹಲವೆಡೆ ಬಿರುಗಾಳಿ ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ ಅಥವಾ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಮುಂದಿನ 7 ದಿನಗಳ#ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) June 11, 2025
ರಾಜ್ಯದಾದ್ಯಂತ ಚದುರಿದಿಂದ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ. ಜೂನ್ 12 ರಿಂದ 15 ರವರೆಗೆ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಅತಿ ಭಾರಿ ಮತ್ತು ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ, IMD ಯಿಂದ #ಆರೆಂಜ್ಅಲರ್ಟ್ ನೀಡಲಾಗಿದೆ. pic.twitter.com/wLMinB2oK7
ಜೂನ್ 13ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಬಾಗಲಕೋಟೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಜೂನ್ 14ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಬೀದರ್, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಗದಗ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ತುಮಕೂರು, ಮಂಡ್ಯ, ದಾವಣಗೆರೆ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ಸಿಕ್ಕಾಪಟ್ಟೆ ತಿಂದ್ರಾ?: ಹೊಟ್ಟೆಭಾರ ಇಳಿಸಲು ಇಲ್ಲಿವೆ ಟಿಪ್ಸ್!
ಜೂನ್ 15 ಮತ್ತು 16ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಬೀದರ್, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಗದಗ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಿತ್ರದುರ್ಗ, ತುಮಕೂರು, ಮಂಡ್ಯ, ಹಾಸನ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ವಿಜಯನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ.