ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka weather: ಇಂದು ರಾಜ್ಯದ ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ರಾಜ್ಯದ ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Profile Prabhakara R Jun 9, 2025 6:00 AM

ಬೆಂಗಳೂರು: ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ವರುಣ (Karnataka Weather) ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಜೂನ್‌ 9ರಿಂದ 14ರವರೆಗೆ ಉತ್ತರ ಮತ್ತು ದಕ್ಷಿಣ ಒಳನಾಡಿಗೆ ಹಾಗೂ ಜೂನ್‌ 12ರಿಂದ 14ರವರೆಗೆ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32°C ಮತ್ತು 21°C ಇರುವ ಸಾಧ್ಯತೆ ಇದೆ.

ಜೂನ್‌ 9ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕ ಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ, ಕೋಲಾರ ಸೇರಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 10ರಂದು ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬೀದರ್, ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ, ಯಾದಗಿರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಕೋಲಾರ, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 11ರಂದು ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ, ಯಾದಗಿರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ, ಕೋಲಾರ ಸೇರಿ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 12ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಗದಗ, ಬೆಳಗಾವಿ, ಹಾವೇರಿ, ಧಾರವಾಡ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಹುಷಾರ್‌! ರೋಗಗಳನ್ನು ಹೊತ್ತು ತರಬಹುದು ಪಾರಿವಾಳಗಳು

ಜೂನ್‌ 13 ಮತ್ತು 14ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬೀದ‌ರ್, ಕಲಬುರಗಿ, ಬಾಗಲಕೋಟೆ, ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.