ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Karnataka Weather: ಏಪ್ರಿಲ್ ತಿಂಗಳ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ಮೇ ತಿಂಗಳಲ್ಲಿ ಮಳೆರಾಯ ಕೊಂಚ ನಿರಾಳ ತಂದಿದ್ದಾನೆ. ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಚುರುಕುಗೊಂಡಿದ್ದು, ವರುಣನ ಅಬ್ಬರ ಕಂಡುಬರುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಏಪ್ರಿಲ್ ತಿಂಗಳ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ಮೇ ತಿಂಗಳಲ್ಲಿ ಮಳೆರಾಯ ಕೊಂಚ ನಿರಾಳ ತಂದಿದ್ದಾನೆ. ಕರ್ನಾಟಕದ ಹಲವೆಡೆ (Karnataka Weather) ಪೂರ್ವ ಮುಂಗಾರು ಚುರುಕುಗೊಂಡಿದ್ದು, ವರುಣನ ಅಬ್ಬರ ಕಂಡುಬರುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' (Yellow Alert) ಘೋಷಣೆ ಮಾಡಿದೆ.
ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ವಿಶೇಷವಾಗಿ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9 ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೇ 8 ರಂದು ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
2 ದಿನ ರಾಜ್ಯಾದ್ಯಂತ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 38 ರಿಂದ 40 ಡಿಗ್ರಿ ಸೆಲ್ಸಿಯಸ್ ವರೆಗೆ ಮುಂದುವರಿಯಲಿದೆ. ಮಳೆಯ ಸಮಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. 24 ರಿಂದ 48 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ತಾಪಮಾನ 33 ಡಿಗ್ರಿ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.