ಬೆಂಗಳೂರು: ಕರ್ನಾಟಕದ್ಯಂತ (karnataka weather) ಮುಂಗಾರು ಮಳೆ ಚುರುಕುಗೊಂಡಿದೆ. ಆಗಸ್ಟ್ 13ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. IMD ವರದಿ ಪ್ರಕಾರ ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಹಾಗೂ ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 10 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಆಗಸ್ಟ್ 10 ಮತ್ತು 11 ರಂದು ಹಗುರ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿಯಾಗಿ ಆಗಸ್ಟ್ 12 ಮತ್ತು 13 ರಂದು ಈ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಆಗಸ್ಟ್ 10 ರಿಂದ 13 ರವರೆಗೆ ಒಂದು ಅಥವಾ ಎರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
Vitamin C: ಮಳೆಗಾಲ ಮತ್ತು ರೋಗನಿರೋಧಕ ಶಕ್ತಿ: ಮಳೆಗಾಲದಲ್ಲಿ ವಿಟಮಿನ್ C ಏಕೆ ಮುಖ್ಯ?
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.