Weather forecast: ಇಂದು ಬೆಂಗಳೂರು, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!
Weather forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆ: ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 22°C ಅಗುವ ಸಾಧ್ಯತೆ ಇದೆ.


ಬೆಂಗಳೂರು: ಬೆಂಗಳೂರು ಸೇರಿ ಹಲವೆಡೆ ಕಳೆದೆರಡು ದಿನಗಳಿಂದ ಭರ್ಜರಿ ಮಳೆಯಾಗಿದೆ. ಅದೇ ರೀತಿ ಇಂದು (ಮಾ.24) ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ (Weather forecast) ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯದಾದ್ಯಂತ ಮಾರ್ಚ್ 25 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾಧ್ಯತೆ ಇದ್ದು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ (heavy Rain) ಸುರಿಯಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆ: ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 22°C ಅಗುವ ಸಾಧ್ಯತೆ ಇದೆ.
ಮಾ. 24ರಂದು ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.
ಮಾ.25ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.
ಮಾ.26ರಂದು ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.
ಮಾ.27ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಇದೇ ರೀತಿಯ ಸ್ಥಿತಿ ಮಾ. 28ರಂದು ಮುಂದುವರಿಯಲಿದೆ.
ಮುಂದಿನ 5 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) March 23, 2025
ರಾಜ್ಯದಾದ್ಯಂತ ಮಾರ್ಚ್ 25 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾದ್ಯತೆಯಿದ್ದು ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ pic.twitter.com/IpodO5H6kn
ಕಲಬುರಗಿಯಲ್ಲಿ ಗರಿಷ್ಠ ತಾಪಮಾನ
ಕಲಬುರಗಿಯಲ್ಲಿ ಶನಿವಾರ ರಾಜ್ಯದಲ್ಲೇ ಗರಿಷ್ಠ ತಾಪಮಾನ 38.2°C ದಾಖಲಾಗಿದೆ. ರಾಜ್ಯದ ಬಯಲು ಸೀಮೆಯ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ತಾಪಮಾನ 17.8°C ದಾಖಲಾಗಿದೆ.